HomeKarnatakaಬಡವರಿಗೆ ಸೈಟ್: ತಿಂಗಳಾಂತ್ಯದೊಳಗೆ ನಿವೇಶನ ಸಿದ್ಧಪಡಿಸಲು ಭೂಮಿ ಗುರುತಿಸಿ: ಡಿಸಿಎಂ ಸೂಚನೆ

ಬಡವರಿಗೆ ಸೈಟ್: ತಿಂಗಳಾಂತ್ಯದೊಳಗೆ ನಿವೇಶನ ಸಿದ್ಧಪಡಿಸಲು ಭೂಮಿ ಗುರುತಿಸಿ: ಡಿಸಿಎಂ ಸೂಚನೆ

ಬೆಂಗಳೂರು: ವಿಧಾನಸೌಧದಲ್ಲಿ ಇಂದು ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್, ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ.

ಭಾರತ್ ಜೋಡೋ ಯುವ ಸಂಘದ ನೋಂದಣಿ ಕಾರ್ಯ ತ್ವರಿತಗೊಳಿಸಿ:

ಭಾರತ್ ಜೋಡೋ ಯುವ ಸಂಘ ಮುಖ್ಯಮಂತ್ರಿಯವರ ಕನಸಿನ ಯೋಜನೆಯಾಗಿದೆ. ಸಂಘಗಳ ನೋಂದಣಿ, ಮೆಂಟರ್ಸ್‌ ಗಳ ನೇಮಕ ಸೇರಿದಂತೆ ಸಂಘ ಪ್ರಾರಂಭಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಬೇಕು. ತಾಂತ್ರಿಕ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು. ಕೂಡಲೇ ಅರ್ಜಿ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿಸಬೇಕು. ಭಾರತ್ ಜೋಡೋ ಯುವಕ ಸಂಘ ಇಡೀ ದೇಶದಲ್ಲಿ ಮೊದಲ ಬಾರಿಗೆ ಜಾರಿಗೊಳಿಸುತ್ತಿರುವ ಕಾರ್ಯಕ್ರಮ. ಇದರಿಂದ ಸರ್ಕಾರಕ್ಕೆ ಮತ್ತು ಅಧಿಕಾರಿಗಳಿಗೆ ಒಳ್ಳೆ ಹೆಸರು ಬರಲಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತ್ ಜೋಡೋ ಯುವ ಸಂಘಗಳ ನೋಂದಣಿ ಹಾಗೂ ಸಂಘಗಳ ಆರಂಭದ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದ ನೋಂದಣಿ ಪ್ರಕ್ರಿಯೆಯನ್ನು ಕೂಡಲೇ ಚುರುಕುಗೊಳಿಸಿ, ಅರ್ಜಿ ನಮೂನೆಗಳನ್ನು ವಿತರಿಸಿ ಭರ್ತಿ ಮಾಡಿಸುವುದು, ಸಂಘಗಳ ನೋಂದಣಿ ಪೂರ್ಣಗೊಳಿಸುವುದು ಹಾಗೂ ತರಬೇತುದಾರರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ. ಯುವಜನರಲ್ಲಿ ನಾಯಕತ್ವ, ಸಾಮಾಜಿಕ ಹೊಣೆಗಾರಿಕೆ ಮತ್ತು ಸಕ್ರಿಯ ನಾಗರಿಕ ಭಾಗವಹಿಸುವಿಕೆಯನ್ನು ಬೆಳೆಸುವ ನಿಟ್ಟಿನಲ್ಲಿ ಭಾರತ್ ಜೋಡೋ ಯುವ ಸಂಘ ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ.

ಯುವಕರ ಸಾಮರ್ಥ್ಯಕ್ಕೆ ಸೂಕ್ತ ವೇದಿಕೆ ಕಲ್ಪಿಸಿ, ಅವರ ಶಕ್ತಿಯನ್ನು ಸಮಾಜ ಮತ್ತು ರಾಜ್ಯದ ಅಭಿವೃದ್ಧಿಗೆ ಸದುಪಯೋಗಪಡಿಸಿಕೊಳ್ಳುವ ಕಾರ್ಯಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ.

ಪ್ರಜಾಸೇವಾ ಅಭಿಯಾನದಲ್ಲಿ ಬರುವ ಅರ್ಜಿಗಳ ತ್ವರಿತ ವಿಲೇವಾರಿ ಮಾಡಿ:

ಪ್ರಜಾಸೇವಾ ಅಭಿಯಾನದಲ್ಲಿ ಹೆಚ್ಚಾಗಿ ಕಂದಾಯ ಇಲಾಖೆಗೆ ಸಂಬಂಧಿಸಿದ ಅರ್ಜಿಗಳು ಬರುತ್ತಿವೆ‌. ಪಹಣಿ ತಿದ್ದುಪಡಿ, ಪೋಡಿ, ಪಿಂಚಣಿ ಸಮಸ್ಯೆ ಸೇರಿದಂತೆ ಮುಂತಾದ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕು. ಆರ್‌ಟಿಸಿ, ಪೋಡಿ ಪ್ರಕರಣಗಳನ್ನು ಸರಳೀಕರಣಗೊಳಿಸಲಾಗಿದೆ. ಆದಾಗ್ಯೂ ಗೊಂದಲಗಳಿದ್ದರೆ ಹಿರಿಯ ಅಧಿಕಾರಿಗಳಿಂದ ಅಗತ್ಯ ಸಲಹೆ ಪಡೆದು, ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

ಪ್ರಜಾಸೇವಾ ಅಭಿಯಾನದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಪಹಣಿ ತಿದ್ದುಪಡಿ, ಪೋಡಿ, ಪಿಂಚಣಿ ಸೇರಿದಂತೆ ಹಲವು ಅರ್ಜಿಗಳು ಸಲ್ಲಿಕೆಯಾಗುತ್ತಿವೆ. ಇಂತಹ ಅರ್ಜಿಗಳು ಕಚೇರಿಗಳಲ್ಲಿ ಅನಗತ್ಯವಾಗಿ ವಿಳಂಬವಾಗದಂತೆ, ನಿಗದಿತ ಅವಧಿಯಲ್ಲಿ ವಿಲೇವಾರಿ ಮಾಡಿ ಜನರಿಗೆ ಸೇವೆ ಒದಗಿಸಬೇಕು ಎಂದು ನಿರ್ದೇಶಿಸಲಾಗಿದೆ. ಆರ್‌ಟಿಸಿ ಹಾಗೂ ಪೋಡಿ ಪ್ರಕರಣಗಳ ಪ್ರಕ್ರಿಯೆಯನ್ನು ಈಗಾಗಲೇ ಸರಳೀಕರಣಗೊಳಿಸಲಾಗಿದ್ದು, ಯಾವುದೇ ಹಂತದಲ್ಲಿ ಗೊಂದಲಗಳಿದ್ದರೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಪಡೆದು ತ್ವರಿತವಾಗಿ ಪರಿಹರಿಸುವಂತೆ ಸೂಚಿಸಲಾಗಿದೆ.

ಸರ್ಕಾರಿ ಸೇವೆ ಪಡೆಯಲು ಜನರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ಇರಬಾರದು. ಜನರ ಅರ್ಜಿಗಳಿಗೆ ಸ್ಪಂದನೆ, ತ್ವರಿತ ವಿಲೇವಾರಿ ಮತ್ತು ಪರಿಣಾಮಕಾರಿ ಆಡಳಿತಕ್ಕೆ ನಮ್ಮ ಆದ್ಯತೆ.

ಬಡವರಿಗೆ ನಿವೇಶನ – ನಿರ್ಲಕ್ಷ್ಯ ಬೇಡ:

ಬಡವರಿಗೆ ನಿವೇಶನ ನೀಡುವ ಕಾರ್ಯಕ್ರಮ ಘೋಷಣೆಯಾದ ಬಳಿಕ ಜನರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈ ಯೋಜನೆಯನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು. ಕೆಲ ಜಿಲ್ಲೆಗಳಲ್ಲಿ ಭೂಮಿ ಗುರುತಿಸುವ ಕೆಲಸ ಆಗಿಲ್ಲ. ನಿವೇಶನ ಸಿದ್ಧಪಡಿಸಲು ಭೂಮಿ ಗುರುತಿಸುವ ಪ್ರಕ್ರಿಯೆಯನ್ನು ತಿಂಗಳಾಂತ್ಯದ ವೇಳೆಗೆ ಪೂರ್ಣಗೊಳಿಸಬೇಕು. ಈ ಬಗ್ಗೆ ನಿರ್ಲಕ್ಷಿಸುವುದು ಬೇಡ. ಹಿರಿಯ ಅಧಿಕಾರಿಗಳು ಟೆಕ್ನಿಕಲ್‌ ಸಹಕಾರ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದರ್‌ ಕುಮಾರ್ ಕಟಾರಿಯಾ, ವಿಪತ್ತು ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ಕಂದಾಯ ಆಯುಕ್ತರಾದ ಮೀನಾ ನಾಗರಾಜ್, ಭೂ ಮಾಪನ ಮತ್ತು ಭೂ ದಾಖಲೆ‌ ಇಲಾಖೆಯ ಆಯುಕ್ತ ವೆಂಕಟರಾಜ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular