HomeKarnatakaಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಕಾಂಗ್ರೆಸ್ ಸರ್ಕಾರ ತಾಳಿ, ಕಾಲುಂಗುರ ತೆಗೆಸಿ ಸುಮಂಗಲಿತನ...

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಕಾಂಗ್ರೆಸ್ ಸರ್ಕಾರ ತಾಳಿ, ಕಾಲುಂಗುರ ತೆಗೆಸಿ ಸುಮಂಗಲಿತನ ಕಸಿಯುವ ಕೆಲಸ ಮಾಡಿದೆ: ಭಾರತಿ ಶೆಟ್ಟಿ

ಬೆಂಗಳೂರು: ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ ಕಾಂಗ್ರೆಸ್ ಸರ್ಕಾರ ತಾಳಿ, ಕಾಲುಂಗುರ ತೆಗೆಸಿ ಹೆಣ್ಣುಮಕ್ಕಳ ಸುಮಂಗಲಿತನ ಕಸಿದುಕೊಳ್ಳುವ ಕೆಲಸ ಮಾಡಿದೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಆರೋಪಿಸಿದ್ದಾರೆ.

ರಾಜ್ಯ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿಯಲ್ಲಿ ನಡೆದ ಕೆಇಎ ಪರೀಕ್ಷೆಗೆ ಹಾಜರಾದ ಹೆಣ್ಣುಮಕ್ಕಳ ತಾಳಿ, ಕಾಲುಂಗುರು ತೆಗೆಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಜಾಬ್ ನಿಂದ ಒಬ್ಬರು ಮೋಸ ಮಾಡಲು ಸಾಧ್ಯವೇ ಅಥವಾ ತಾಳಿ, ಕಾಲುಂಗುರ ಬಳೆಯಿಂದ ಮೋಸ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದ ಅವರು, ವಿಶ್ವದಾದ್ಯಂತ ವಿಮಾನ ನಿಲ್ದಾಣಗಳಲ್ಲೂ ತಾಳಿ ತೆಗೆಸಿದ ಉದಾಹರಣೆ ಇಲ್ಲ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಈ ರೀತಿ ಮಾಡಿದ್ದು, ಇದರ ವಿರುದ್ಧ ಮಹಿಳಾ ಮೋರ್ಚಾ ಹೋರಾಟ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular