HomeEntertainment'ಭರ್ಜರಿ ಗಂಡು' ಚಿತ್ರದ ವಿಡಿಯೋ ಸಾಂಗ್ ರಿಲೀಸ್

‘ಭರ್ಜರಿ ಗಂಡು’ ಚಿತ್ರದ ವಿಡಿಯೋ ಸಾಂಗ್ ರಿಲೀಸ್

ಪ್ರಸಿದ್ಧ್ ನಿರ್ದೇಶನದ ಕಿರಣ್ ರಾಜ್ ಅಭಿನಯದ ‘ಭರ್ಜರಿ ಗಂಡು’ ಚಿತ್ರದ ”ಕಾದು ಕೂತ ಚಂದಿರ” ಎಂಬ ಸುಂದರ ಸಾಲುಗಳುಳ್ಳ ವಿಡಿಯೋ ಹಾಡೊಂದನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ಈ ಹಾಡಿಗೆ ಅನಿರುದ್ಧ ಶಾಸ್ತ್ರಿ ಮತ್ತು ಐಶ್ವರ್ಯ ರಂಗರಾಜನ್ ಧ್ವನಿಯಾಗಿದ್ದು, ಗುಮ್ಮಿನೇನಿ ವಿಜಯ್ ಸಂಗೀತ ಸಂಯೋಜನೆ ನೀಡಿದ್ದಾರೆ. ಗಾಯಕ ಅನಿರುದ್ಧ ಶಾಸ್ತ್ರಿ ಅವರೇ ಸಾಹಿತ್ಯ ಬರೆದಿದ್ದಾರೆ.

ಈ ಚಿತ್ರವನ್ನು ಪ್ರಸಿದ್ಧ್ ಸಿನಿಮಾಸ್ ಕ್ಯಾಂಪ್ ಬ್ಯಾನರ್ ನಲ್ಲಿ ನಿರ್ದೇಶಕ ಪ್ರಸಿದ್ಧ್ ಸೇರಿದಂತೆ ಅನಿಲ್ ಕುಮಾರ್ ಮತ್ತು ಮದನ್ ಗೌಡ ನಿರ್ಮಾಣ ಮಾಡಿದ್ದಾರೆ. ಕಿರಣ್ ರಾಜ್ ಅವರಿಗೆ ಜೋಡಿಯಾಗಿ ಯಶ ಶಿವಕುಮಾರ್ ಅಭಿನಯಿಸಿದ್ದಾರೆ. ವೆಂಕಿ ಸಂಕಲನ, ಮಳವಳ್ಳಿ ಸಾಯಿ ಕೃಷ್ಣ ಸಂಭಾಷಣೆ, ಕಿಟ್ಟಿ ಕೌಶಿಕ್ ಛಾಯಾಗ್ರಹಣವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular