ರಾಜ್ಯ ಸರ್ಕಾರದಿಂದ SC ಸಮುದಾಯಕ್ಕೆ ಭರ್ಜರಿ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ.!

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ. 2024-25ನೇ ಸಾಲಿನಲ್ಲಿ ಈ ಯೋಜನೆಗಳಿಗೆ ಅರ್ಜಿ ಅಹ್ವಾನಿಸಿದೆ.

ಅಕ್ಟೋಬರ್ 10 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, 2023-24ನೇ ಸಾಲಿನಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ

ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ. ಘಟಕ ವೆಚ್ಚ 1 ಲಕ್ಷ ರೂ. ಸಹಾಯಧನ 50,000 ರೂ. ಸಾಲ, 50,000 ರೂ. ಶೇ. 4 ರಷ್ಟು ಬಡ್ಡಿದರ

ಭೂ ಒಡೆತನ ಯೋಜನೆ

ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಈ ಕೆಳಕಂಡ ಘಟಕ ವೆಚ್ಚದಲ್ಲಿ ಕೃಷಿ ಜಮೀನು ಖರೀದಿಸಿ ಘಟಕ 25 ಲಕ್ಷ ರೂ. ಸಹಾಯಧ ಶೇ. 50 ರಷ್ಟು ಸಹಾಯಧನ

ಮೈಕ್ರೋ ಕ್ರೆಡಿಟ್ ಯೋಜನೆ

ಮಹಿಳಾ ಸ್ವಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಗೆ ಸಾಲ ಹಾಗೂ ಸಹಾಯಧನ ಸೌಲಭ್ಯ ನೀಡಲಾಗುವುದು. ಘಟಕ ವೆಚ್ಚ 2.50 ಲಕ್ಷ ರೂ. ಸಹಾಯಧನ 1.50 ಲಕ್ಷ ರೂ. ಸಾಲ 1 ಲಕ್ಷ ರೂ.

ಗಂಗಾ ಕಲ್ಯಾಣ ಯೋಜನೆ

1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣಮತ್ತು ಅತಿ ಸಣ್ಣ ರೈತರಿಗೆ ಕೊಳವೆ ಬಾವಿ ಕೊರೆದು ಪಂಪ್ ಸೆಟ್ ಅಳವಡಿಸಿ, ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು.

https://twitter.com/KarnatakaVarthe/status/1833379199131803737

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read