ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ 5 ಪಂದ್ಯಗಳ ಟಿ20 ಸರಣಿಯ ಅಂತಿಮ ಹಾಗೂ ಐದನೇ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಟಾಸ್ ಗೆದ್ದು ಮೊದಲ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ತಂಡ ಈ ಸರಣಿಯಲ್ಲಿ ಮೊದಲ ಬಾರಿಗೆ ಮೊದಲು ಬ್ಯಾಟಿಂಗ್ ಮಾಡಲಿದೆ.
ಈಗಾಗಲೇ 5 ಪಂದ್ಯಗಳ ಸರಣಿಯಲ್ಲಿ ಮುನ್ನಡೆ ಸಾಧಿಸಿ ಸರಣಿ ವಶಪಡಿಸಿಕೊಂಡಿರುವ ಟೀಮ್ ಇಂಡಿಯಾ, ಕಳೆದ ಪಂದ್ಯದಲ್ಲಿ 87 ರನ್‌ಗಳ ಸೋಲು ಕಂಡಿತ್ತು. ಈ ಹಿನ್ನೆಲೆಯಲ್ಲಿ ಅಂತಿಮ ಪಂದ್ಯಕ್ಕೆ ತಂಡದಲ್ಲಿ ಎರಡು ಮುಖ್ಯ ಬದಲಾವಣೆಗಳನ್ನು ಮಾಡಲಾಗಿದ್ದು, ವೇಗಿ ಭುವನೇಶ್ವರ್ ಕುಮಾರ್ ಹಾಗೂ ಮಿಸ್ಟ್ರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಪ್ಲೇಯಿಂಗ್ 11ಗೆ ಮರಳಿದ್ದಾರೆ.
ತಂಡಗಳ ಪ್ಲೇಯಿಂಗ್ 11 :
-
ಭಾರತ: ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ವರುಣ್ ಚಕ್ರವರ್ತಿ.
-
ನ್ಯೂಜಿಲ್ಯಾಂಡ್: ಟಿಮ್ ಸೈಫರ್ಟ್ (ವಿಕೆಟ್ ಕೀಪರ್), ಫಿನ್ ಅಲೆನ್, ಡೆರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಬೆವನ್ ಜೇಕಬ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ನಾಥನ್ ಸ್ಮಿತ್, ಆಡಮ್ ಮಿಲ್ನೆ, ಜೇಕಬ್ ಡಫ್ಫಿ, ಬ್ಲೇರ್ ಟಿಕ್ನರ್.

