HomeKarnatakaಮುರಿನಕಟ್ಟೆ ದ್ವಂಸ ಖಂಡಿಸಿ ಇಂದು ಭಟ್ಕಳ ಬಂದ್ ಗೆ ಕರೆ

ಮುರಿನಕಟ್ಟೆ ದ್ವಂಸ ಖಂಡಿಸಿ ಇಂದು ಭಟ್ಕಳ ಬಂದ್ ಗೆ ಕರೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಭಟ್ಕಳದಲ್ಲಿ ಮುರಿನಕಟ್ಟೆ ವಿವಾದ ತಣ್ಣಗಾಗಿಲ್ಲ. ಹಿಂದೂ ಪರ ಸಂಘಟನೆಗಳ ವತಿಯಿಂದ ಶುಕ್ರವಾರ ಭಟ್ಕಳ ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ.

ಆಟೋ ಚಾಲಕರು, ಅಂಗಡಿ ಮಾಲೀಕರು ಭಟ್ಕಳ ಬಂದ್ ಗೆ ಬೆಂಬಲ ನೀಡಿದ್ದಾರೆ/ ಪ್ರತಿ ಗ್ರಾಮದಲ್ಲಿ ಸಭೆ ನಡೆಸಿ ಬಂದ್ ಗೆ ಸಂಘಟನೆಗಳು ಬೆಂಬಲ ಕೋರಿದ್ದವು. ಹಿಂದೂ ಕಾರ್ಯಕರ್ತರ ವಿರುದ್ಧದ ಸುಳ್ಳು ಪ್ರಕರಣ ವಾಪಸ್ ಪಡೆಯಬೇಕು. ಹಿಂದೂಗಳ ಮೇಲಿನ ದೌರ್ಜನ್ಯ ಮರುಕಳಿಸದಂತೆ ತಡೆಯಬೇಕು ಎಂದು ಒತ್ತಾಯಿಸಲಾಗಿದೆ.

ಹಿಂದೂ ಪರ ಸಂಘಟನೆಗಳು ಇಂದು ಭಟ್ಕಳ ಬಂದ್ ಗೆ ಕರೆ ನೀಡಿವೆ. ಪ್ರತಿಭಟನಾ ರ್ಯಾಲಿಯಲ್ಲಿ 10,000ಕ್ಕೂ ಹೆಚ್ಚು ಜನರನ್ನು ಸೇರಿಸಲು ಪ್ಲಾನ್ ಮಾಡಿಕೊಳ್ಳಲಾಗಿದ್ದು, ಮುಂಜಾಗ್ರತೆ ಕ್ರಮವಾಗಿ ಹೆಚ್ಚುವರಿ ಪೊಲೀಸ್ ನಿಯೋಜಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಧ್ಯಾಹ್ನ 3 ಗಂಟೆಯಿಂದ ಪಟ್ಟಣದ ಚನ್ನಪಟ್ಟಣ ಹನುಮಂತ ದೇವಸ್ಥಾನ ಆವರಣದಿಂದ ತಾಲೂಕು ಆಡಳಿತ ಸೌಧದವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಯಲಿದೆ. ಮುರಿನಕಟ್ಟೆಯಲ್ಲಿ ಇತ್ತೀಚೆಗೆ ನಿರ್ಮಿಸಿದ ನೂತನ ಕಟ್ಟೆಯನ್ನು ಧ್ವಂಸ ಮಾಡಿದ ಕೃತ್ಯ ಖಂಡಿಸಿ ಮತ್ತು ಕಟ್ಟೆ ದ್ವಂಸಗೊಳಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular