HomeKarnatakaBIG NEWS: ಹಾಸನ ಜಿಲ್ಲೆ ಪ್ರವೇಶಿಸದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ ನಿರ್ಬಂಧ

BIG NEWS: ಹಾಸನ ಜಿಲ್ಲೆ ಪ್ರವೇಶಿಸದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ ನಿರ್ಬಂಧ

ಬೆಂಗಳೂರು: ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಭವಾನಿ ರೇವಣ್ಣಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜಾಮೀನು ಸಿಕ್ಕರೂ ಭವಾನಿ ರೇವಣ್ಣಗೆ ಸಂಕಷ್ಟ ಎದುರಾಗಿದೆ.

ಮಧ್ಯಾಹ್ನ 1 ಗಂಟೆಯೊಳಗೆ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಬೇಕು. ಎಸ್ಐಟಿ ವಿಚಾರಣೆಗೆ ಸಹಕರಿಸುವಂತೆ ಹೈಕೋರ್ಟ್ ಸೂಚಿಸಿದೆ. ಅಲ್ಲದೇ ಮಧ್ಯಂತರ ಜಾಮೀನು ಮುಂದಿನ ಶುಕ್ರವಾರದವರೆಗೆ ಮಾತ್ರ ಅನ್ವಯವಾಗಲಿದೆ ಎಂದು ತಿಳಿಸಿದೆ.

ಇದೇ ವೇಳೆ ಭವಾನಿ ರೇವಣ್ಣಗೆ ಹಾಸನ ಜಿಲ್ಲೆಗೆ ಹಾಗೂ ಕೆ.ಆರ್.ನಗರ ಪ್ರವೇಶ ಮಾಡದಂತೆ ನಿರ್ಬಂಧ ವಿಧಿಸಿ ಹೈಕೋರ್ತ್ ಮಹತ್ವದ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular