HomeKarnatakaBIG NEWS: ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ

BIG NEWS: ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ

ಬೆಂಗಳೂರು: ಮಧ್ಯಂತರ ಜಾಮೀನು ಬೆನ್ನಲ್ಲೇ ಭವಾನಿ ರೇವಣ್ಣ ಎಸ್ಐಟಿ ಮುಂದೆ ವಿಚಾರಣೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ.

ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ನಲ್ಲಿ ಭವಾನಿ ರೇವಣ್ಣಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಆದರೆ ಮಧ್ಯಾಹ್ನ 1 ಗಂಟೆಯೊಳಗೆ ಎಸ್ಐಟಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.

ಇದೀಗ ಭವಾನಿ ರೇವಣ್ಣ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಭವಾನಿ ಪರ ವಕೀಲ ಅರುಣ್ ಕೂಡ್ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. 5 ಗಂಟೆ ಕಾಲ ಮಾತ್ರ ಕಸ್ಟಡಿಯಲ್ಲಿಟ್ಟುಕೊಳ್ಳಬಹುದು ಎಂದು ಹೈಕೋರ್ಟ್ ಎಸ್ ಐಟಿಗೆ ಸೂಚಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭವಾನಿ ರೇವಣ್ಣರನ್ನು ಬಂಧಿಸುವಂತಿಲ್ಲ. ಭವಾನಿ ರೇವಣ್ಣ ತನಿಖೆಗೆ ಸಹಕಾರ ನೀಡಬೇಕು. ಹಾಸನ, ಕೆ.ಆರ್.ನಗರಕ್ಕೆ ಪ್ರವೇಶಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದೆ.

For Latest News Updates, Join Our Whatsapp Community🚩
RELATED ARTICLES

Most Popular