HomeKarnatakaBIG NEWS: ಎಲ್ಲವೂ ಷಡ್ಯಂತ್ರ; ಮಹಿಳೆ ಕಿಡ್ನ್ಯಾಪ್ ಆರೋಪ ನಿರಾಕರಿಸಿದ ಭವಾನಿ ರೇವಣ್ಣ

BIG NEWS: ಎಲ್ಲವೂ ಷಡ್ಯಂತ್ರ; ಮಹಿಳೆ ಕಿಡ್ನ್ಯಾಪ್ ಆರೋಪ ನಿರಾಕರಿಸಿದ ಭವಾನಿ ರೇವಣ್ಣ

ಬೆಂಗಳೂರು: ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಮಧ್ಯಂತರ ಜಾಮೀನು ಸಿಕ್ಕಿದ್ದರೂ ಕೋರ್ಟ್ ಸೂಚನೆ ಮೇರೆಗೆ ಎಸ್ಐಟಿ ತನಿಖೆಗೆ ಹಾಜರಾಗಿದ್ದಾರೆ.

ಎಸ್ಐಟಿ ವಿಚಾರಣೆ ವೇಳೆ ಭವಾನಿ ರೇವಣ್ಣ, ನಾನು ಮಹಿಳೆಯನ್ನು ಕಿಡ್ನ್ಯಾಪ್ ಮಾಡಿಲ್ಲ. ಇದೆಲ್ಲವೂ ಷಡ್ಯಂತ್ರ ಎಂದು ತಿಳಿಸಿದ್ದಾರೆ. ಸಂತ್ರಸ್ತೆ ನಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ನಾನು ಆಕೆಯನ್ನು ಕಿಡ್ನ್ಯಾಪ್ ಮಾಡಿಸಿಲ್ಲ. ಎಲ್ಲ ಷಡ್ಯಂತ್ರ ನಡೆದಿದೆ. ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ ಎಂದಿದ್ದಾರೆ.

ಅಲ್ಲದೇ ನಾನು ಯಾರನ್ನೂ ಕರೆದುಕೊಂಡು ಬರುವಂತೆ ಹೇಳಿಯೂ ಇಲ್ಲ. ನನಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ. ನಿನ್ನೆ ನಾಲ್ಕು ಗಂಟೆಗಳ ಕಾಲ ಭವಾನಿ ರೇವಣ್ಣ ವಿಚಾರಣೆ ನಡೆಸಲಾಗಿದ್ದು, ಇಂದು ಮತ್ತೆ ವಿಚರಣೆಗೆ ಹಾಜರಾಗುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular