HomeKarnatakaBIG NEWS: ಮಾಜಿ ಕಾರು ಚಾಲಕ, ಆತನ ಪತ್ನಿಯನ್ನು ಕಿಡ್ನ್ಯಾಪ್ ಮಾಡಿ ಚಿತ್ರಹಿಂಸೆ; ಭವಾನಿ ರೇವಣ್ಣ,...

BIG NEWS: ಮಾಜಿ ಕಾರು ಚಾಲಕ, ಆತನ ಪತ್ನಿಯನ್ನು ಕಿಡ್ನ್ಯಾಪ್ ಮಾಡಿ ಚಿತ್ರಹಿಂಸೆ; ಭವಾನಿ ರೇವಣ್ಣ, ಪ್ರಜ್ವಲ್ ರೆವಣ್ಣ ವಿರುದ್ಧ ಗಂಭೀರ ಆರೋಪ

ಹಾಸನ: ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಹಾಗೂ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, ಮಾಜಿ ಕಾರು ಚಾಲಕ ಹಾಗೂ ಆತನ ಪತ್ನಿಯನ್ನು ಕಿಡ್ನ್ಯಾಪ್ ಮಾಡಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಮಾಜಿ ಕಾರು ಚಾಲಕ ಕಾರ್ತಿಕ್ ದಕ್ಷಿಣ ವಲಯ ಐಜಿಪಿಗೆ ದೂರು ನೀಡಿದ್ದಾರೆ. ಕಾರ್ತಿಕ್ 10 ವರ್ಷಗಳ ಕಾಲ ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕನಾಗಿ ಕೆಲಸ ಮಾಡಿದ್ದರು. ಹೊಳೆನರಸೀಪುರ ತಾಲೂಕಿನಲ್ಲಿರುವ 13 ಎಕರೆ ಜಮೀನು ಮಾರಾಟ ಮಾಡುವಂತೆ ಒತ್ತಾಯಿಸಿ ತನ್ನನ್ನು ಹಾಗೂ ತನ್ನ ಪತ್ನಿಯನ್ನು ಕಿಡ್ನ್ಯಾಪ್ ಮಾಡಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿ ಕಾರ್ತಿಕ್, ಭವಾನಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾರ್ಚ್ 12, 2023ರಂದು ಕಿಡ್ನ್ಯಾಪ್ ಮಾಡಿದ್ದು, ದಾಖಲೆಗಳ ಸಮೇತ ಐಜಿಪಿಗೆ ದೂರು ನೀಡಿದ್ದಾರೆ. ತಮ್ಮನ್ನು ಬಲವಂತವಾಗಿ ಕರೆದೊಯ್ದು 13 ಎಕರೆ ಜಮೀನನ್ನು ಬೇರೆಯವರ ಹೆಸರಿಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ದೂರಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular