HomeEntertainmentಟೀಸರ್ ಬಿಡುಗಡೆ ದಿನಾಂಕ ಘೋಷಣೆ ಮಾಡಿದ 'ಭೀಮ' ಚಿತ್ರತಂಡ

ಟೀಸರ್ ಬಿಡುಗಡೆ ದಿನಾಂಕ ಘೋಷಣೆ ಮಾಡಿದ ‘ಭೀಮ’ ಚಿತ್ರತಂಡ

‘ಸಲಗ’ ಯಶಸ್ಸಿನ ಬಳಿಕ ದುನಿಯಾ ವಿಜಯ್ ಇದೀಗ ಮತ್ತೊಮ್ಮೆ ನಿರ್ದೇಶಿಸಿ ನಾಯಕನಾಗಿ ಅಭಿನಯಿಸುತ್ತಿರುವ ‘ಭೀಮ’ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಒಂದರ ಮೇಲೊಂದು ಸಿಹಿ ಸಿದ್ದಿಯನ್ನು ನೀಡುತ್ತಲೇ ಇದೆ.

ಜನವರಿ 19ರಂದು ಸಂಜೆ 6 ಗಂಟೆಗೆ ಟೀಸರ್ ರಿಲೀಸ್ ಮಾಡುವುದಾಗಿ ಚಿತ್ರತಂಡ ಇಂದು ಸಾಮಾಜಿಕ ಜಾಲತಾಣದಲ್ಲಿ ಘೋಷಣೆ ಮಾಡಿದೆ.

ಈ ಚಿತ್ರವನ್ನು ಕೃಷ್ಣ ಕ್ರಿಯೇಶನ್ಸ್ ಹಾಗೂ ಜಗದೀಶ್ ಫಿಲಂಸ್ ಬ್ಯಾನರ್ ನಡಿ ಕೃಷ್ಣ ಸಾರ್ಥಕ್ ಮತ್ತು ಜಗದೀಶ್ ಗೌಡ ಬಂಡವಾಳ ಹೂಡಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ ನೀಡಿದ್ದು, ಶಿವಸೇನಾ ಛಾಯಾಗ್ರಹಣವಿದೆ. ದುನಿಯಾ ವಿಜಯ್ ಹಾಗೂ ಅಶ್ವಿನಿ ಪ್ರಮುಖ ಪಾತ್ರದಲ್ಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular