BIG NEWS: ಭೀಮಾನದಿ ತೀರದಲ್ಲಿ ಪ್ರವಾಹ ಭೀತಿ: ಗ್ರಾಮಸ್ಥರಿಗೆ ಕಟ್ಟೆಚ್ಚರ ಘೋಷಿಸಿದ ಜಿಲ್ಲಾಡಳಿತ

ಯಾದಗಿರಿ: ಮಹಾರಾಷ್ಟ್ರ, ಪಶ್ಚಿಮ ಘಟ್ಟ ಭಾಗದಲ್ಲಿ ಧಾರಾಕಾರ ಮಳೆಯಿಂದಾಗಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, ಯಾದಗಿರಿ ಜಿಲ್ಲೆಯಲ್ಲಿ ಭೀಮಾನದಿ ಪ್ರವಾಹದ ಆತಂಕ ಎದುರಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಅಲ್ಲದೇ ಭೀಮಾ ನದಿ ಅಪಾಯದ ಮಟ್ಟದಲ್ಲಿ ಉಕ್ಕಿ ಹರಿಯುತ್ತಿದ್ದು, ನದಿ ತೀರದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಲರ್ಟ್ ಘೋಷಿಸಿದೆ.

ನದಿತೀರದ ಜನರು, ಗ್ರಾಮಸ್ಥರು ನದಿಗೆ ಇಳಿಯದಂತೆ ಕಟ್ಟೆಚ್ಚರಕ್ಕೆ ಸೂಚಿಸಿದೆ. ವಾರದ ಹಿಂದಷ್ಟೇ ಬರಿದಾಗಿದ್ದ ಭೀಮೆಯ ಒಡಲು ಮಳೆಯಿಂದಾಗಿ ಭರ್ತಿಯಾಗಿದ್ದು, ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ವಡಗೇರ ತಾಲೂಕಿನ ಗುರುಸಣಗಿ ಸೇತುವೆಯಿಂದ 3 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗುತ್ತಿದ್ದು, ಇದರಿಂದಾಗಿ ನದಿತೀರದ ಸುತ್ತಮುತ್ತಲ ಹಳ್ಳಿಗಳಲ್ಲಿ ಮತ್ತಷ್ಟು ಪ್ರವಾಹದ ಆತಂಕ ಎದುರಾಗಿದೆ.

ಎರಡು ದಿನಗಳಿಂದ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ನದಿ ತೀರದ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಡಂಗೂರ ಹಾಗೂ ಮೈಕ್ ಗಳ ಮೂಲಕ ಘೋಷಣೆ ಮಾಡಿ ನದಿತೀರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗುತ್ತಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read