ಬೆಂಗಳೂರು BHELನಲ್ಲಿ ಉದ್ಯೋಗ ಪಡೆಯಲು ಬಯಸುವ ಪದವೀಧರರಿಗೆ ಸುವರ್ಣಾವಕಾಶವೊಂದು ಎದುರಾಗಿದೆ. ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ಎಲೆಕ್ಟ್ರಾನಿಕ್ಸ್ ಡಿವಿಷನ್ ವಿವಿಧ ವಿಭಾಗಗಳಲ್ಲಿ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ವಿಶೇಷವೆಂದರೆ, ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಇಲ್ಲದೆ ನೇರವಾಗಿ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ಆಗಸ್ಟ್ 22ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೌದು. ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL)–ಎಲೆಕ್ಟ್ರಾನಿಕ್ಸ್ ಡಿವಿಷನ್, ಬೆಂಗಳೂರಿನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಹುದ್ದೆ: ಪ್ರಾಜೆಕ್ಟ್ ಎಂಜಿನಿಯರ್
ಒಟ್ಟು ಹುದ್ದೆಗಳು: 14
ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್, ಇನ್‌ಸ್ಟ್ರುಮೆಂಟೇಶನ್ ಅಥವಾ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಪದವಿ ಪಡೆದಿರಬೇಕು. ಸಾಮಾನ್ಯ ಹಾಗೂ ಇತರೆ ಅಭ್ಯರ್ಥಿಗಳು ಎಲ್ಲಾ ವರ್ಷ/ಸೆಮಿಸ್ಟರ್‌ಗಳನ್ನು ಸೇರಿಸಿ ಕನಿಷ್ಠ 60% ಅಂಕಗಳು ಅಥವಾ ಸಮಾನ CGPA ಪಡೆದಿರಬೇಕು.
SC/ST ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳು ಅಥವಾ ಸಮಾನ CGPA ಇದ್ದರೆ ಸಾಕು.
ಗರಿಷ್ಠ ವಯೋಮಿತಿ: 23 ವರ್ಷ. OBC ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ಹಾಗೂ PwBD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ವಿಧಾನ: ಆನ್‌ಲೈನ್
ಅರ್ಜಿ ಆರಂಭ: ಆಗಸ್ಟ್ 8
ಅರ್ಜಿ ಸಲ್ಲಿಸಲು ಕೊನೆಯ ದಿನ: ಆಗಸ್ಟ್ 22
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆ ಇರುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ BHEL ಎಲೆಕ್ಟ್ರಾನಿಕ್ಸ್ ಡಿವಿಷನ್‌ನ ಅಧಿಕೃತ ವೆಬ್‌ಸೈಟ್ ಪರಿಶೀಲಿಸಬಹುದು.

