HomeKarnatakaಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ

ಭೀಕರ ಅಪಘಾತ: ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಹಬ್ಬದ ಸಂದರ್ಭದಲ್ಲೇ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಅತಿ ವೇಗವಾಗಿ ಬಂದ ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಳೋಬಾಳ ಕ್ರಾಸ್ ಬಳಿ ಈ ಘಟನೆ ನಡೆದಿದೆ.

ಹುಕ್ಕೇರಿ ತಾಲೂಕಿನ ಕೆಎಂ ನಾಗನೂರು ಗ್ರಾಮದ ವಿನಯ ವಿಜಯ ಹಿರೇಮಠ (19), ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಶ್ರವಣ ಗುರುಸಿದ್ದಯ್ಯ ಹಿರೇಮಠ (17) ಮೃತ ಯುವಕರು. ಅಪಘಾತದ ಬಳಿಕ ಸ್ಥಳದಲ್ಲಿಯೇ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟಪ್ರಭಾ ಪೊಲೀಸರು ಆರೋಪಿ ಚಾಲಕನ್ನನು ವಶಕ್ಕೆ ಪಡೆದಿದ್ದಾರೆ. ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

ಸಾಲ ಪಡೆದಿದ್ದ ಮಹಿಳೆ ಕಿಡ್ನ್ಯಾಪ್: ವಿಡ್ಯೋ ಮಾಡಿ ಹರಿಬಿಡುವುದಾಗಿ ಬೆದರಿಕೆ: ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ಮಹಿಳೆಯೊಬ್ಬರನ್ನು ಅಪಹರಿಸಿ ಹಲ್ಲೆ ನಡೆಸಿ, ಆಕೆಯ ವಿಡಿಯೋವನ್ನು ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ರೇಷ್ಮಾ ಬಾನು, ನಝತ್ ಮತ್ತು ಸುಹೇಲ್ ಬಂಧಿತರು. ಸಂತ್ರಸ್ತ ಮಹಿಳೆಗೆ ರೇಷ್ಮಾ ಬಾನು ಈ ಹಿಂದೆ ಪರಿಚಯವಿತ್ತು. ಸುಮಾರು ಎರಡು ವರ್ಷಗಳ ಹಿಂದೆ ರೇಷ್ಮಾ ಬಳಿ ಮಹಿಳೆ ಒಂದು ಲಕ್ಷ ರೂಪಾಯಿ ಸಾಲ ಪಡೆದಿದ್ದರಂತೆ. ರೇಷ್ಮಾ ಮೂಲಕ ನಝತ್ ಎಂಬಾಕೆಯ ಪರಿಚಯವೂ ಸಂತ್ರಸ್ತೆಗೆ ಆಗಿತ್ತು. ಬಳಿಕ ನಝತ್ ಬಳಿ 50 ಸಾವಿರ ರೂಪಾಯಿ ಸಾಲ ಪಡೆದಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ನಝತ್‌ಗೆ ಪ್ರತಿ ತಿಂಗಳು 5 ಸಾವಿರ ರೂಪಾಯಿಯಂತೆ ಕಂತಿನಲ್ಲಿ ಹಣ ಪಾವತಿಸುತ್ತಿದ್ದ ಮಹಿಳೆ, ವೈಯಕ್ತಿಕ ಕಾರಣಗಳಿಂದ ಕಳೆದ ಆರು ತಿಂಗಳಿಂದ ಹಣ ಪಾವತಿಸಲು ಸಾಧ್ಯವಾಗಿರಲಿಲ್ಲ. ಈ ವಿಚಾರವಾಗಿ ಪದೇಪದೆ ಸಂಪರ್ಕಿಸುತ್ತಿದ್ದ ನಝತ್‌ನ ಫೋನ್ ನಂಬರ್ ನ್ನು ಮಹಿಳೆ ಬ್ಲಾಕ್ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆ ಮನೆ ಖಾಲಿ ಮಾಡಿಕೊಂಡು ತಾಯಿಯ ಮನೆಗೆ ತೆರಳಿದ್ದ ಸಂದರ್ಭದಲ್ಲಿ, ಕೆಲಸವೊಂದಿದೆ ಹಾಗೂ ಹಣ ಸಿಗಲಿದೆ ಸುಳ್ಳು ಹೇಳಿ ನಝತ್ ತಮ್ಮ ಮನೆಗೆ ಕರೆಸಿಕೊಂಡಿದ್ದರು. ಅಲ್ಲಿಗೆ ಸಂತ್ರಸ್ತೆ ತೆರಳಿದ ಬಳಿಕ ಆಕೆಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ವೇಳೆ ರೇಷ್ಮಾ ಬಾನು ಹಾಗೂ ಆಕೆಯ ಪತಿ ಸುಹೇಲ್ ಕೂಡ ಅಲ್ಲಿಗೆ ಬಂದಿದ್ದು, ಸಂತ್ರಸ್ತೆಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಚಾಕುವಿನಿಂದ ಹಲ್ಲೆ ನಡೆಸಿ ಬಳಿಕ ಆಟೋದಲ್ಲಿ ಮಹಿಳೆಯನ್ನು ಕರೆದೊಯ್ದು ಕುಂಬಳಗೋಡು ಸಮೀಪದ ಮನೆಯೊಂದರಲ್ಲಿ ಇರಿಸಲಾಗಿತ್ತು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಹಿಳೆಯನ್ನು ಮನೆಯಲ್ಲಿ ಕೂಡಿಹಾಕಿದ್ದ ವೇಳೆ ಆಕೆಯನ್ನು ಅವಮಾನಿಸಿ ವಿಡಿಯೋ ಮಾಡಲಾಗಿತ್ತು ಹಾಗೂ ಹಣ ನೀಡದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಲಾಗಿತ್ತು.

ಈ ನಡುವೆ ಮಹಿಳೆ ಕಾಣೆಯಾಗಿರುವ ಹಿನ್ನೆಲೆಯಲ್ಲಿ ಆಕೆಯ ತಾಯಿ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ದೂರಿನ ಮೇರೆಗೆ ತನಿಖೆ ನಡೆಸಿದ ಪೊಲೀಸರು ಸಂತ್ರಸ್ತೆಯನ್ನು ಪತ್ತೆಹಚ್ಚಿ ರಕ್ಷಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular