HomeIndiaBREAKING NEWS: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಗುಂಡಿನ ದಾಳಿ

BREAKING NEWS: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಗುಂಡಿನ ದಾಳಿ

ಲಖ್ನೋ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಮೇಲೆ ಫೈರಿಂಗ್ ಮಾಡಲಾಗಿದೆ. ಉತ್ತರ ಪ್ರದೇಶದ ಸಹರಾನ್ಪುರ ಬಳಿ ಆಜಾದ್ ಮೇಲೆ ಫೈರಿಂಗ್ ಮಾಡಲಾಗಿದೆ.

ಹರಿಯಾಣ ನೋಂದಣಿ ಸಂಖ್ಯೆ ಇರುವ ವಾಹನದಲ್ಲಿ ಬಂದಿದ್ದ ದುಷ್ಕರ್ಮಿಗಳು ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಯಲ್ಲಿ ಚಂದ್ರಶೇಖರ ಆಜಾದ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಹರಾನ್ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬುಧವಾರ ಸಂಜೆ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಆಜಾದ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಅಂಬೇಡ್ಕರ್‌ವಾದಿ ಕಾರ್ಯಕರ್ತರ ಬೆಂಗಾವಲು ವಾಹನದ ಮೇಲೆ ಕಾರ್ ನಲ್ಲಿ ಬಂದ ಕೆಲವು ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಸಹರಾನ್‌ಪುರ ಎಸ್‌ಎಸ್‌ಪಿ ಡಾ. ವಿಪಿನ್ ತಾಡಾ ತಿಳಿಸಿದ್ದಾರೆ.

 

ಒಂದು ಗುಂಡು ಚಂದ್ರಶೇಖರ್ ಆಜಾದ್ ಅವರನ್ನು ದಾಟಿದೆ. ಅವರು ಆರೋಗ್ಯವಾಗಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಸಿಹೆಚ್‌ಸಿಗೆ ಕರೆದೊಯ್ಯಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಗಾಯಗೊಂಡಿರುವ ಆಜಾದ್ ಅವರ ಛಾಯಾಚಿತ್ರಗಳನ್ನು ಹಂಚಿಕೊಳ್ಳಲಾಗಿದ್ದು, ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular