ವಿಜಯಪುರ: ಭೀಮಾ ತೀರದ ರೌಡಿಶೀಟರ್ ತುಳಸಿರಾಮನನ್ನು ಗಡಿಪಾರು ಮಾಡಲಾಗಿದ್ದು, ಚಾಮರಾಜನಗರ ಜೈಲಿಗೆ ಶಿಫ್ಟ್ ಮಾಡಲು ಆದೇಶ ಹೊರಡಿಸಲಾಗಿದೆ.
ಭೀಮಾತೀರದ ಹಂತಕ ಬಾಗಪ್ಪ ಹರಿಜನ ಶಿಷ್ಯನಾಗಿರುವ ತುಳಸಿರಾಮನನ್ನು ಗಡಿಪಾರು ಮಾಡಿ ವಿಜಯಪುರ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಆದೇಶ ಹೊರಡಿಸಿದ್ದಾರೆ. ಮೂಲತಃ ಇಂಡಿ ತಾಲೂಕಿನ ಅರ್ಜನಾಳ ಗ್ರಾಮದ ತುಳಸಿರಾಮ ಪ್ರಸ್ತುತ ವಿಜಯಪುರದ ಗಣೇಶನಗರದಲ್ಲಿ ವಾಸವಾಗಿದ್ದ.
ಓರ್ವ ವೃತ್ತಿಪರ ಅಪರಾಧಿ, ಸಮಾಜದ್ರೋಹಿ, ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಚಟುವಟಿಕೆಗಳಲ್ಲಿ ತುಳಸಿರಾಮ ತೊಡಗಿಸಿಕೊಂಡಿದ್ದ ಆರೋಪದ ಮೇಲೆ ಗೂಂಡಾ ಕಾಯ್ದೆಯಡಿ ಬಂಧಿಸಲು ಆದೇಶ ಹೊರಡಿಸಲಾಗಿದೆ.
ವಿವಿಧ ಅಪರಾಧ ಎಸಗಿರುವ ತುಳಸಿರಾಮನನ್ನು ಗಡಿಪಾರು ಮಾಡಿ ಚಾಮರಾಜನಗರ ಜಿಲ್ಲಾ ಕಾರಾಗೃಹದಲ್ಲಿ ಬಂಧನದಲ್ಲಿಡಲು ಆದೇಶಿಸಲಾಗಿದೆ.

