ಮಹಿಳೆ ಸ್ನಾನ ಮಾಡ್ತಿದ್ದಾಗ ಮೊಬೈಲ್‌ ನಲ್ಲಿ ಚಿತ್ರೀಕರಿಸಿದ ಯುವಕ; ಕೇಸ್‌ ದಾಖಲಾಗುತ್ತಿದ್ದಂತೆ ಎಸ್ಕೇಪ್

ಮಹಿಳೆ ಸ್ನಾನ ಮಾಡುತ್ತಿದ್ದ ವೇಳೆ ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಣ ಮಾಡ್ತಿದ್ದ ವ್ಯಕ್ತಿಯ ಮೇಲೆ ಬಿಹಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಟಿಟಿ ನಗರದಲ್ಲಿ 28 ವರ್ಷದ ಮಹಿಳೆ ಸ್ನಾನ ಮಾಡುತ್ತಿದ್ದಾಗ ಪಕ್ಕದ ಮನೆಯ ವ್ಯಕ್ತಿಯೊಬ್ಬ ಈ ರೀತಿಯ ಕೃತ್ಯವೆಸಗಿದ್ದಾನೆ.

ಮಾಧ್ಯಮದವರೊಂದಿಗೆ ಮಾತನಾಡಿದ ಟಿಟಿ ನಗರ ಪೊಲೀಸ್ ಠಾಣೆ ಪ್ರಭಾರಿ ಚೈನ್ ಸಿಂಗ್ ರಘುವಂಶಿ, ಮಹಿಳೆಯೊಬ್ಬರು ಬೆಳಿಗ್ಗೆ 10 ಗಂಟೆ ಸುಮಾರಿಗೆ ತನ್ನ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ಯಾರೋ ತನ್ನ ಸ್ನಾನಗೃಹದಲ್ಲಿ ಇಣುಕಿ ನೋಡಲು ಪ್ರಯತ್ನಿಸುತ್ತಿರುವುದು ಅವರ ಗಮನಕ್ಕೆ ಬಂದಿದೆ.

ತಕ್ಷಣ ಎಚ್ಚೆತ್ತ ಆಕೆ ಯಾರೆಂದು ನೋಡಲು ಪ್ರಯತ್ನಿಸಿದಾಗ, ಆಕೆಯ ನೆರೆಹೊರೆಯವ ಬಾತ್ ರೂಂನಲ್ಲಿ ಇಣುಕಿ ನೋಡುತ್ತಿರುವುದು ಮತ್ತು ಅವನ ಮೊಬೈಲ್ ಮೂಲಕ ವೀಡಿಯೊ ಮಾಡುವುದನ್ನು ಗಮನಿಸಿದ್ದಾರೆ. ಆತನಿಗೆ ಎಚ್ಚರಿಕೆ ನೀಡ್ತಿದ್ದಂತೆ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದರು.

ಆರೋಪಿ ಇತ್ತೀಚೆಗೆ ಬಾಡಿಗೆ ಮನೆಯಲ್ಲಿ ವಾಸಿಸಲು ಬಂದಿದ್ದ. ಐಪಿಸಿ ಸೆಕ್ಷನ್ 354 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read