HomeKarnatakaಭೋವಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ: ಇಬ್ಬರು ಹಿಂದಿನ ವ್ಯವಸ್ಥಾಪಕರ ವಿರುದ್ಧ ಪ್ರಾಸಿಕ್ಯೂಷನ್ ದೂರು ದಾಖಲಿಸಿದ ED

ಭೋವಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ: ಇಬ್ಬರು ಹಿಂದಿನ ವ್ಯವಸ್ಥಾಪಕರ ವಿರುದ್ಧ ಪ್ರಾಸಿಕ್ಯೂಷನ್ ದೂರು ದಾಖಲಿಸಿದ ED

ಬೆಂಗಳೂರು: ಭೋವಿ ಅಭಿವೃದ್ಧಿ ನಿಗಮದಲ್ಲಿ 88.9 ಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಹಿಂದಿನ ಪ್ರಧಾನ ವ್ಯವಸ್ಥಾಪಕ ಬಿ.ಕೆ.ನಾಗರಾಜಪ್ಪ ಹಾಗೂ ಹಿಂದಿನ ವ್ಯವಸ್ಥಾಪಕ ನಿರ್ದೇಶಕಿ ಆರ್.ಲೀಲಾವತಿ ವಿರುದ್ಧ ಜಾರಿ ನಿರ್ದೇಶನಾಲಯ-ಇಡಿ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ನಲ್ಲಿ ಪ್ರಾಸಿಕ್ಯೂಷನ್ ದೂರು ದಾಖಲಿಸಿದೆ.

ಬಿ.ಕೆ.ನಾಗರಾಜಪ್ಪ ಹಾಗೂ ಆರ್.ಲೀಲಾವತಿ ಇಬ್ಬರೂ ತಮ್ಮ ಅಧಿಕಾರಾವಧಿಯಲ್ಲಿ ಫಲಾನುಭವಿಗಳ ಹೆಸರಲ್ಲಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ತಮ್ಮ ಆಪ್ತರು ಹಾಗೂ ಸಂಬಂಧಿಕರ ಖಾತೆಗಳಿಗೆ ಕೋಟ್ಯಂತರ ರೂಪಾಯಿ ಹಣ ವರ್ಗಾಯಿಸಿದ್ದರು ಎಂದು ನ್ಯಾಯಾಲಯಕ್ಕೆ ವಿವರ ಸಲ್ಲಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಗರಾಜಪ್ಪ ಅವರ ಪಾಲುದಾರಿಕೆಯ ನ್ಯೂ ಕ್ರೀಮ್, ಆದಿತ್ಯಾ ಕಂಪನಿ, ಅನ್ನಿಕಾ ಎಂಟರ್ ಪ್ರೈಸೆಸ್, ಸೋಮೇಶ್ವರ್ ಎಂಟರ್ ಪ್ರೈಸಸ್ ಸೇರಿ ವಿವಿಧ ಕಂಪನಿಗಳಿಗೆ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ ಎಂದು ಇಡಿ ದೂರು ನೀಡಿದೆ.

ಇನ್ನು ಪ್ರಕರಣ ಸಂಬಂಧ ಈಗಾಗಲೇ 27.27 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನು ಮುಟ್ಟುಗೊಲು ಹಾಕಿಕೊಳ್ಳಲಾಗಿದೆ ಎಂದು ಇಡಿ ನ್ಯಾಯಾಲಯಕ್ಕೆ ವಿವರಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular