HomeKarnatakaBIG NEWS: ಭೋವಿ ನಿಗಮ ಹಗರಣ: ತನಿಖಾಧಿಕಾರಿ ಸಸ್ಪೆಂಡ್

BIG NEWS: ಭೋವಿ ನಿಗಮ ಹಗರಣ: ತನಿಖಾಧಿಕಾರಿ ಸಸ್ಪೆಂಡ್

ಬೆಂಗಳೂರು: ಭೋವಿ ನಿಗಮದಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದಲೇ ಹಣ ಪಡೆದ ಆರೋಪದಲ್ಲಿ ತನಿಖಾಧಿಕಾರಿಯನ್ನು ಸಸ್ಪೆಂಡ್ ಮಾಡಿರುವ ಘಟನೆ ನಡೆದಿದೆ.

ಎ.ಡಿ.ನಾಗರಾಜ್ ಅಮಾನತುಗೊಂಡಿರುವ ತನಿಖಾಧಿಕಾರಿ. ಭೋವಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಸಿಐಡಿ ತನಿಖೆಗೆ ಆದೇಶ ನೀಡಿತ್ತು. ಆದರೆ ತನಿಖಾಧಿಕಾರಿಯಾಗಿದ್ದ ಎ.ಡಿ.ನಾಗರಾಜ್ ಆರೋಪಿಗಳಿಂದಲೇ ಅವರು ಹಣ ಪಡೆದಿರುವ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಎ.ಡಿ.ನಾಗರಾಜ್, ಲೀಲಾವತಿ ಸೇರಿ ಹಲವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು ಇದೀಗ ಆರೋಪಿಗಳಿಂದ ಹಣ ಪಡೆದು, ಭ್ರಷ್ಟಾಚಾರ ನಡೆಸಿದ ಹಿನ್ನೆಲೆಯಲ್ಲಿ ಎ.ಡಿ.ನಾಗರಾಜ್ ಅವರನ್ನು ಅಮಾನತುಗೊಳಿಸಿ ಸಿಐಡಿ ಡಿಜಿ ಸಲೀಂ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular