HomeIndiaಮಾಜಿ ಸಿಎಂ ಭೂಪೇಶ್ ಬಘೇಲ್ ನಿವಾಸದ ಮೇಲೆ CBI ಅಧಿಕಾರಿಗಳ ದಾಳಿ

ಮಾಜಿ ಸಿಎಂ ಭೂಪೇಶ್ ಬಘೇಲ್ ನಿವಾಸದ ಮೇಲೆ CBI ಅಧಿಕಾರಿಗಳ ದಾಳಿ

ಛತ್ತೀಸ್ ಗಢ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಛತ್ತೀಸ್ ಗಢದ ರಾಯ್ಪುರ ಹಾಗೂ ಭಿಲಾಯಿಯಲ್ಲಿರುವ ಬಘೇಲ್ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಇದೇ ವೇಳೆ ಬಘೇಲ್ ಅವರ ಆಪ್ತರ ಮನೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಮನೆಗಳ ಮೇಲೂ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಇಡಿ ಅಧಿಕಾರಿಗಳು ಭೂಪೇಶ್ ಬಘೇಲ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಇದೀಗ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular