HomeKarnatakaಬಿಡದಿ ಟೌನ್‌ಶಿಪ್‌ ನಿರ್ಮಾಣಕ್ಕೆ ವಿರೋಧ: ಆ.9 ರಿಂದ ಮೂರು ದಿನಗಳ ಕಾಲ ಜೆಡಿಎಸ್‌ ಬೃಹತ್‌ ಪಾದಯಾತ್ರೆ

ಬಿಡದಿ ಟೌನ್‌ಶಿಪ್‌ ನಿರ್ಮಾಣಕ್ಕೆ ವಿರೋಧ: ಆ.9 ರಿಂದ ಮೂರು ದಿನಗಳ ಕಾಲ ಜೆಡಿಎಸ್‌ ಬೃಹತ್‌ ಪಾದಯಾತ್ರೆ

ಬೆಂಗಳೂರು: ಒಂದೆಡೆ ಕಾವೇರಿ ಜಲ ವಿವಾದ. ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಮಂಡ್ಯ ಭಾಗದಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದೆ. ಈ ನಡುವೆ ಬಿಡದಿ ಟೌನ್ ಶಿಪ್ ವಿರೋಧಿಸಿ ರೈತರು ನಡೆಸುತ್ತಿರುವ ಧರಣಿ ಮುಂದುವರೆದಿದೆ. ಇದೇ ವೇಳೆ ಬಿಡದಿ ಟೌನ್ ಶಿಪ್ ವಿರೋಧಿಸಿ ಜೆಡಿಎಸ್ ಪಾದಯಾತ್ರೆಗೆ ಮುಂದಾಗಿದೆ

ಬಿಡದಿ ಟೌನ್ ಶಿಪ್ ವಿರೋಧಿಸಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೊಸ ದಿನಾಂಕ ಘೋಷಿಸಿದ್ದಾರೆ. ಚೆನ್ನಮ್ಮ ದೇವೇಗೌಡರ ನಿಧನದಿಂದ ಮುಂದೂಡಿಕೆ ಆಗಿದ್ದ ಪಾದಯಾತ್ರೆಗೆ ಈಗ ಹೊಸ ದಿನಾಂಕ ನಿಗದಿ ಮಾಡಲಾಗಿದೆ. ದೋಸ್ತಿ ಪಕ್ಷ ಬಿಜೆಪಿಯನ್ನ ದೂರವಿಟ್ಟು ಪಾದಯಾತ್ರೆ ಮಾಡಲು ಜೆಡಿಎಸ್ ತೀರ್ಮಾನಿಸಿದೆ.

ಆಗಸ್ಟ್ 9, 10, 11 ರಂದು ಪಾದಯಾತ್ರೆ ನಡೆಯಲಿದೆ. ಆಗಸ್ಟ್ 9 ರಂದು ಭೈರಮಂಗಲದಿಂದ ಪಾದಯಾತ್ರೆ ಶುರುವಾಗಲಿದ್ದು, ಆಗಸ್ಟ್ 11 ರಂದು ಫ್ರೀಡಂ ಪಾರ್ಕ್ ಗೆ ಪಾದಯಾತ್ರೆ ತಲುಪಲಿದೆ. ಅಂದೇ ಬೃಹತ್ ಸಮಾವೇಶವನ್ನ ಜೆಡಿಎಸ್ ಹಮ್ಮಿಕೊಂಡಿದೆ. ಪಾದಯಾತ್ರೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಚಾಲನೆ ನೀಡಲಿದ್ದು, 3 ದಿನಗಳ ಪಾದಯಾತ್ರೆಯಲ್ಲಿ ಒಂದು ದಿನ ಮಾಜಿ ಪ್ರಧಾನಿ ದೇವೇಗೌಡರು ಭಾಗಿಯಾಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಾದಯಾತ್ರೆ ಮುಗಿದ ಬಳಿಕ ಆಗಸ್ಟ್ 14 ರಂದು ವಿಧಾನಸೌಧ ಚಲೋ ನಡೆಸಲಿದೆ. ಫ್ರೀಡಂ ಪಾರ್ಕ್ ನಿಂದ ವಿಧಾನಸೌಧಕ್ಕೆ ವಿಧಾನಸೌಧ ಚಲೋ ನಡೆಯಲಿದೆ.

ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿದ್ದು, ರೈತರ ಭೂಮಿ ಉಳಿಸಲು ‘ಬಿಡದಿ ಪಾದಯಾತ್ರೆ’ಗೆ ನೂತನ ದಿನಾಂಕ ನಿಗದಿ!

ನಮ್ಮ ಪೂಜ್ಯ ಅಜ್ಜಿಯವರಾದ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ನಿಧನದ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಮುಂದೂಡಲ್ಪಟ್ಟಿದ್ದ ಬಿಡದಿ ಪಾದಯಾತ್ರೆಗೆ ಈಗ ಹೊಸ ದಿನಾಂಕಗಳನ್ನು ನಿಗದಿಪಡಿಸಲಾಗಿದೆ.

ಬಿಡದಿ ಟೌನ್‌ಶಿಪ್ ನೆಪದಲ್ಲಿ 6 ಕಂದಾಯ ಗ್ರಾಮಗಳ ಬಡ ರೈತರ ಕೃಷಿ ಭೂಮಿಯನ್ನು ಕಬಳಿಸಲು ಹೊರಟಿರುವ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಮ್ಮ ನ್ಯಾಯಯುತ ಹೋರಾಟ ನಿಲ್ಲುವುದಿಲ್ಲ, ಇನ್ನು ತೀವ್ರಗೊಳ್ಳಲಿದೆ.

ಹೋರಾಟದ ನೂತನ ದಿನಾಂಕಗಳು:

  • ದಿನಾಂಕ: ಆಗಸ್ಟ್ 9 ರಿಂದ 11
  • ಪಾದಯಾತ್ರೆಯ ಮಾರ್ಗ: ಬೈರಮಂಗಲ ವೃತ್ತದಿಂದ ಫ್ರೀಡಂ ಪಾರ್ಕ್, ಬೆಂಗಳೂರು.

ರೈತರ ಹಿತರಕ್ಷಣೆಗಾಗಿ ನಡೆಯುತ್ತಿರುವ ಈ ಬೃಹತ್ ಪಾದಯಾತ್ರೆಯಲ್ಲಿ ನಾಡಿನ ಜನತೆ, ರೈತ ಬಾಂಧವರು ಹಾಗೂ ಜಾತ್ಯತೀತ ಜನತಾದಳದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬೆಂಬಲಿಸಬೇಕು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular