ಬೆಂಗಳೂರು: ಬಿಡದಿ ಟೌನ್ಶಿಪ್ ವಿರೋಧಿಸಿಜೆಡಿಎಸ್ ನಡೆಸುತ್ತಿರುವ ಬೃಹತ್ ಪಾದಯಾತ್ರೆಯು ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ರೈತರ ಪರವಾದ ಈ ಹೋರಾಟಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕೂಡ ಎಂಟ್ರಿಕೊಟ್ಟಿದ್ದು, ಪಾದಯಾತ್ರೆಗೆ ಮತ್ತಷ್ಟು ಬಲಬಂದಂತಾಗಿದೆ.
ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರ ನಾಯಕತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ನಾಯಕರು ಇಂದು 16 ಕಿಲೋಮೀಟರ್ ದೂರ ಪಾದಯಾತ್ರೆ ಮೂಲಕ ಕ್ರಮಿಸಲಿದ್ದಾರೆ.
ಪಾದಯಾತ್ರೆಯು ಇಂದು ಬೆಳಿಗ್ಗೆ 11 ಗಂಟೆಗೆ ಬಿಡದಿಯಿಂದ ಆರಂಭವಾಗಿದ್ದು, ಮೈಸೂರು ರಸ್ತೆ ನೈಸ್ ಜಂಕ್ಷನ್ ವರೆಗೆ ಸಾಗಲಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಇಂದು ಪಾದಯಾತ್ರೆಗೆ ಸಾಥ್ ನೀಡಿದ್ದಾರೆ. ಪಾದಯಾತ್ರೆಯಲ್ಲಿ ದೇವೆಗೌಡರು ಪಾಲ್ಗೊಂಡಿದ್ದಾರೆ.
ನಿನ್ನೆ, ಪಾದಯಾತ್ರೆಯ ಮೊದಲ ದಿನ ಏಳು ಕಿಲೋಮೀಟರ್ ಕ್ರಮಿಸಲಾಗಿತ್ತು. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಆರ್. ಅಶೋಕ್ ಅವರು ನಿನ್ನೆಯ ಪಾದಯಾತ್ರೆಗೆ ಚಾಲನೆ ನೀಡಿದ್ದರು. ಬಿಡದಿ ಟೌನ್ಶಿಪ್ ನಿರ್ಮಾಣದಿಂದ ಸ್ಥಳೀಯ ರೈತರು ಮತ್ತು ಜನರಿಗೆ ಆಗುವ ತೊಂದರೆಗಳನ್ನು ಎತ್ತಿ ಹಿಡಿದು, ಈ ಯೋಜನೆಯನ್ನು ಕೈಬಿಡಬೇಕೆಂದು ಆಗ್ರಹಿಸಿ ಈ ಪಾದಯಾತ್ರೆ ನಡೆಸಲಾಗುತ್ತಿದೆ.

