HomeKarnatakaಬಿಡದಿ ಟೌನ್ ಶಿಪ್ ವಿಚಾರಕ್ಕೂ ಆಣೆ-ಪ್ರಮಾಣ: ಕನಸಿನ ಕೂಸು ಹೌದಾ ಅಲ್ವಾ ಎಂದು ಧರ್ಮಸ್ಥಳಕ್ಕೆ ಬಂದು...

ಬಿಡದಿ ಟೌನ್ ಶಿಪ್ ವಿಚಾರಕ್ಕೂ ಆಣೆ-ಪ್ರಮಾಣ: ಕನಸಿನ ಕೂಸು ಹೌದಾ ಅಲ್ವಾ ಎಂದು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ: HDKಗೆ ಶಾಸಕ ಬಾಲಕೃಷ್ಣ ಸವಾಲು

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ವಿಚಾರವಾಗಿ ಬಿಜೆಪಿಯ ನಾಯಕರು ಶಾಸಕರನ್ನು ಧರ್ಮಸ್ಥಳಕ್ಕೆ ಕರೆದೊಯ್ದು ಆಣೆ-ಪ್ರಮಾಣ ಮಾಡಿಸಲು ಮುಂದಾಗಿತ್ತು. ಈ ಬಗ್ಗೆ ಪಕ್ಷದ ಹಿರಿಯ ನಾಯಕರಿಂದಲೇ ತೀವ್ರ ಆಕ್ಷೇಪ ವ್ಯಕ್ತವಾದ ಕಾರಣ ಆಣೆ-ಪ್ರಮಾಣ ನಿರ್ಧಾರದಿಂದ ಹಿಂದೆ ಸರಿಯಲಾಯಿತು. ಅಡ್ಡಮತದಾನದ ವಿಚಾರವಾಗಿ ಬಿಜೆಪಿಯ ಆಣೆ-ಪ್ರಮಾಣದ ಬೆನ್ನಲ್ಲೇ ಇದೀಗ ಬಿಡದಿ ಟೌನ್ ಶಿಪ್ ವಿಚಾರಕ್ಕೂ ಆಣೆ-ಪ್ರಮಾಣದ ಸವಾಲು ಹಾಕಲಾಗಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಹೆಚ್.ಸಿ.ಬಾಲಕೃಷ್ಣ, ಬಿಡದಿ ಟೌನ್ ಶಿಪ್ ವಿಚಾರವಾಗಿ ಹೆಚ್.ಡಿ.ಕುಮಾರಸ್ವಾಮಿ ಧರ್ಮಸ್ಥಳಕ್ಕೆ ಬಂದು ಆಣೆ-ಪ್ರಮಾಣ ಮಾಡಲಿ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಡದಿ ಟೌನ್ ಶಿಪ್ ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿದ ಯೋಜನೆ. ಈಗ ಅವರು ರೈತರ ಪರ ಪ್ರತಿಭಟನೆ ಎಂದು ಡ್ರಾಮಾ ಮಾಡುತ್ತಿದ್ದಾರೆ. ದುಟ್ಟುಕೊಟ್ಟು ಜನರನ್ನು ಕರೆತಂದು ಪ್ರತಿಭಟನೆಗಳನ್ನು ಮಾಡಿಸುತ್ತಿದ್ದಾರೆ. ಬಿಡದಿ ಟೌನ್ ಶಿಪ್ ಹೆಚ್.ಡಿ.ಕುಮಾರಸ್ವಾಮಿ ಅವರ ಕನಸಿನ ಕೂಸು. ಅವರ ಕನಸಿನ ಕೂಸು ಹೌದಾ, ಅಲ್ವಾ ಎಂದು ಧರ್ಮಸ್ಥಳಕ್ಕೆ ಬಂದು ಆಣೆ-ಪ್ರಮಾಣ ಮಾಡಿ ಹೇಳಲಿ ಎಂದು ಸವಾಲು ಹಾಕಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular