HomeKarnatakaBREAKING: ಟ್ರಕ್ –ಟಾಟಾ ಏಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

BREAKING: ಟ್ರಕ್ –ಟಾಟಾ ಏಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ಬೀದರ್: ಬೀದರ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ಅಪಘಾತ ನಡೆದಿದೆ.

ಟ್ರಕ್, ಟಾಟಾ ಎಸ್ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟಾಟಾ ಏಸ್ ಚಾಲಕ ವಲಿ(31) ದಸ್ತಗಿರಿ ದಾವಲಸಾಬ(36), ರಶೀದ್ ಶೇಕ್(41) ಅಮಾಮ್ ಶೇಕ್(51) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಮೃತರು ಮಹಾರಾಷ್ಟ್ರದ ಉಗ್ಗಿರ್ ನಿವಾಸಿಗಳಾಗಿದ್ದಾರೆ. ಟಾಟಾ ಏಸ್ ವಾಹನದಲ್ಲಿ ಒಟ್ಟು 14 ಜನ ಪ್ರಯಾಣಿಸುತ್ತಿದ್ದರು. ಉಗ್ಗಿರ್ ದಿಂದ ಹೈದರಾಬಾದ್ ಗೆ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಧನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular