HomeKarnatakaBREAKING NEWS: ಎಲೆಕ್ಟ್ರಾನಿಕ್ ಶಾಪ್ ನಲ್ಲಿ ಅಗ್ನಿ ಅವಘಡ; ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಅಂಗಡಿ

BREAKING NEWS: ಎಲೆಕ್ಟ್ರಾನಿಕ್ ಶಾಪ್ ನಲ್ಲಿ ಅಗ್ನಿ ಅವಘಡ; ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಅಂಗಡಿ

ಬೀದರ್: ಎಲೆಕ್ಟ್ರಾನಿಕ್ ಶಾಪ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಯ ಕೆನ್ನಾಲಿಗೆಗೆ ಇಡೀ ಅಂಗಡಿ ಹೊತ್ತಿ ಉರಿದಿರುವ ಘಟನೆ ಬೀದರ್ ನಲ್ಲಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದೆ. ಬೀದರ್ ನ ಮೋಹನ್ ಮಾರುಕಟ್ಟೆ ಬಳಿಯ ಅಂಗಡಿಯಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಉರಿಯಲಾರಂಭಿಸಿದೆ.

ಅಂಗಡಿಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳು ಬೆಂಕಿಗಾಹುತಿಯಾಗಿವೆ. ಸುಮಾರು 50 ಲಕ್ಷಕ್ಕೂ ಹೆಚ್ಚು ವಸ್ತುಗಳು ಭಸ್ಮವಾಗಿವೆ. ಶಿವಕುಮಾರ್ ಹಾಗೂ ಪ್ರಕಾಶ್ ಬಿರಾದಾರ್ ಎಂಬುವವರಿಗೆ ಸೇರಿದ ಅಂಗಡಿ ಇದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular