ಬೀದರ್: ನಾಲ್ಕು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಹೇಯ ಘಟನೆ ಬೀದರ್ ನಲ್ಲಿ ನಡೆದಿದೆ.
ಬಾಲಕಿಯನ್ನು ನರ್ಸರಿ ಶಾಲೆಗೆ ಕಳುಹಿಸಿದ್ದ ವೇಳೆ ಕಾಮುಕನ್ಯಾರೋ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದು, ಬಾಲಕಿ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಎಂದಿನಂತೆ ನರ್ಸರಿ ಶಾಲೆಗೆ ತೆರಳಿದ್ದ ವೇಳೆ ಬಾಲಕಿ ಮೇಲೆ ಅಟ್ಟಹಾಸ ಮೆರೆಯಲಾಗಿದೆ. ಬಾಲಕಿ ಮನೆಗೆ ವಾಪಾಸ್ ಆದಾಗ ರಕ್ತಸ್ರಾವದಿಂದ ಬಳಲುತ್ತಿದ್ದು, ಈ ವೇಳೆ ಘಟನೆ ಬಗ್ಗೆ ಗೊತ್ತಾಗಿದೆ.
ತೀವ್ರವಾಗಿ ಅಸ್ವಸ್ಥಗೊಂಡಿರುವ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೀದರ್ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.