BREAKING: ನ್ಯಾಯಾಧೀಶರ ನಿವಾಸಕ್ಕೇ ಕನ್ನ: 7.61 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ಬೀದರ್: ಬೀದರ್ ನ್ಯಾಯಾಧೀಶರ ನಿವಾಸದಲ್ಲಿ 7,61,800 ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ.

ಬೀದರ್ ನ ಜನವಾಡ ರಸ್ತೆಯಲ್ಲಿರುವ ನ್ಯಾಯಾಧೀಶರ ವಸತಿಗೃಹದಲ್ಲಿ ಕಳ್ಳರು ಕೃತ್ಯವೆಸಗಿದ್ದಾರೆ. ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ಡಿ. ಶೇಜ್ ಚೌಟಾಯಿ ಅವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ.

ಬೀದರ್ ನ್ಯೂಟೌನ್ ಪೊಲೀಸ್ ಠಾಣೆಗೆ ನ್ಯಾಯಾಧೀಶರು ದೂರು ನೀಡಿದ್ದಾರೆ. ರಂಜಾನ್ ಹಬ್ಬದ ನಿಮಿತ್ತ ಕುಟುಂಬದವರೆಲ್ಲ ಕೊಪ್ಪಳಕ್ಕೆ ತೆರಳಿದ್ದ ವೇಳೆಯಲ್ಲಿ ಕಳ್ಳರು ಚಿನ್ನಾಭರಣ ಕಳವು ಮಾಡಿದ್ದಾರೆ.

ಏಪ್ರಿಲ್ 1ರಂದು ರಾತ್ರಿ 1:40 ರಿಂದ 2:30ರ ನಡುವೆ ಚಿನ್ನಾಭರಣ ಕಳವು ಮಾಡಲಾಗಿದೆ. ಬೀದರ್ ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read