HomeKarnatakaರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧೆಡೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ. ಕಾರವಾರ, ಬೀದರ್ ನಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ.

ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ ಎಇಇ ಕಾಶ್ ಆರ್ ರೇವಣಕರ್ ಅವರ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಕಾರವಾರದ ಐಶ್ವರ್ಯ ರೆಸಿಡೆನ್ಸಿಯಲ್ ನಲ್ಲಿರುವ ಪ್ರಕಾಶ್ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಬೀದರ್ ಜಿಲ್ಲೆಯಲ್ಲಿಯೂ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಭಾಲ್ಕಿ ಕಾರಂಜಾ ವಿಭಾಗದ ಇಇ ಶಿವಕುಮಾರ ಸ್ವಾಮಿಗೆ ಸೇರಿದ ಮನೆ ಹಾಗೂ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ಬೀದರ್ ನಗರದ ಅಗ್ರಿಕಲ್ಚರ್ ಕಾಲೋನಿಯಲ್ಲಿರುವ ನಿವಾಸ, ನಾಗೂರ್ ಗ್ರಾಮದ ಮನೆ, ಭಾಲ್ಕಿ ಪಟ್ಟಣದ ಕಾರಂಜಾ ಕಚೇರಿ, ಕಲಬುರಗಿ ನಗರದ ಎಂಬಿ ಕಾಲೋನಿಯ ಮನೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಲೋಕಾಯುಕ್ತ ಪೊಲೀಸ್ ತಂಡದಿಂದ ದಾಳಿ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular