HomeKarnatakaBREAKING NEWS: ಏಕಾಏಕಿ ಹೊತ್ತಿ ಉರಿದ ಮೊಬೈಲ್ ಅಂಗಡಿ; 200ಕ್ಕೂ ಹೆಚ್ಚು ಮೊಬೈಲ್ ಗಳು ಬೆಂಕಿಗಾಹುತಿ

BREAKING NEWS: ಏಕಾಏಕಿ ಹೊತ್ತಿ ಉರಿದ ಮೊಬೈಲ್ ಅಂಗಡಿ; 200ಕ್ಕೂ ಹೆಚ್ಚು ಮೊಬೈಲ್ ಗಳು ಬೆಂಕಿಗಾಹುತಿ

ಬೀದರ್: ಮೊಬೈಲ್ ಶಾಪ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ನೋಡನೋಡುತ್ತಿದ್ದಂತೆ ಇಡೀ ಅಂಗಡಿ ಹೊತ್ತಿ ಉರಿದ ಘಟನೆ ಬೀದರ್ ಜಿಲ್ಲೆಯ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.

ಲೈಕ್ ಪಾಶಾ ಎಂಬುವವರಿಗೆ ಸೇರಿದ ಮೊಬೈಲ್ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಕೆಲ ಸಮಯದಲ್ಲೇ ಇಡೀ ಅಂಗಡಿ ಬೆಂಕಿಗಾಹುತಿಯಾಗಿದೆ.

ಅಂಗಡಿಯಲ್ಲಿದ್ದ 200ಕ್ಕೂ ಹೆಚ್ಚು ಮೊಬೈಲ್ ಗಳು, ಪೀಠೋಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular