HomeKarnatakaಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ; ಮಹಿಳೆ ಮೇಲೆ ಹಲ್ಲೆ

ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ; ಮಹಿಳೆ ಮೇಲೆ ಹಲ್ಲೆ

ಬೀದರ್: ಹಾವೇರಿಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಘಟನೆ ಬೆನ್ನಲ್ಲೇ ಬೀದರ್ ನಲ್ಲಿಯೂ ಇಂತದ್ದೇ ಘಟನೆ ನಡೆದಿದೆ. ಮುಸ್ಲಿಂ ಯುವಕರ ಗುಂಪು ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಬೀದರ್ ಜಿಲ್ಲೆಯ ಬಸವಕಲ್ಯಾಣ ಹೊರವಲಯದ ಪಾರ್ಕ್ ನಲ್ಲಿ ಹಿಂದೂ ವ್ಯಕ್ತಿಯ ಜೊತೆ ಮುಸ್ಲಿಂ ಮಹಿಳೆಯೊಬ್ಬರು ಕುಳಿತಿದ್ದಕ್ಕೆ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಯುವಕರ ಗುಂಪು, ಮುಸ್ಲಿಂ ಮಹಿಳೆಯರ ಹೆಸರು ಹಾಳು ಮಾಡುತ್ತಿದ್ದೀಯಾ? ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಮಹಿಳೆಯ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿರುವ ಫೋಟೋ, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular