HomeKarnatakaBREAKING : ಬೀದರ್'ನಲ್ಲಿ ‘ಭಾರತ್ ಮಾತಾಕಿ ಜೈ’ ಎಂದ ವಿದ್ಯಾರ್ಥಿಗೆ ಬೆದರಿಕೆ ; ಪ್ರಾಂಶುಪಾಲರ...

BREAKING : ಬೀದರ್’ನಲ್ಲಿ ‘ಭಾರತ್ ಮಾತಾಕಿ ಜೈ’ ಎಂದ ವಿದ್ಯಾರ್ಥಿಗೆ ಬೆದರಿಕೆ ; ಪ್ರಾಂಶುಪಾಲರ ವಿರುದ್ಧ ‘FIR’ ದಾಖಲು

ಬೀದರ್: ಸ್ವಾತಂತ್ರ್ಯ ದಿನಾಚರಣೆಯ ವೇಳೆ ‘ವಂದೇ ಮಾತರಂ’ ಹಾಗೂ ‘ಭಾರತ್ ಮಾತಾಕೀ ಜೈ’ ಎಂದು ಘೋಷಣೆ ಕೂಗಿದ ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಬೀದರ್ ಜಿಲ್ಲೆಯ ಚಿಟಗುಪ್ಪಾ ಪಟ್ಟಣದ ಶಾಹೀನ್ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ವಿದ್ಯಾರ್ಥಿಯ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪ್ರಾಂಶುಪಾಲ ಅಬ್ದುಲ್ ಹಕೀಮ್ ವಿರುದ್ಧ ಪೊಲೀಸರು ಎಫ್‌ಐಆರ್ (FIR) ದಾಖಲಿಸಿದ್ದಾರೆ.

ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾಲೇಜಿನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದ ಬಳಿಕ ಪಿಯು ವಿದ್ಯಾರ್ಥಿ ಸಾಗರ್ ಗೌಳಿ ‘ಭಾರತ್ ಮಾತಾಕೀ ಜೈ’ ಹಾಗೂ ‘ವಂದೇ ಮಾತರಂ’ ಎಂದು ಘೋಷಣೆ ಕೂಗಿದ್ದ ಎನ್ನಲಾಗಿದೆ. ಈ ವೇಳೆ ಪ್ರಾಂಶುಪಾಲರು ವಿದ್ಯಾರ್ಥಿಗೆ ಬೆದರಿಕೆ ಹಾಕಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

‘ಮತ್ತೊಮ್ಮೆ ವಂದೇ ಮಾತರಂ ಕೂಗಿದರೆ ಹುಷಾರ್’?

ವಿದ್ಯಾರ್ಥಿಯ ಪೋಷಕರ ಆರೋಪದ ಪ್ರಕಾರ, ‘ವಂದೇ ಮಾತರಂ’ ಒಂದು ಧಾರ್ಮಿಕ ಸಮುದಾಯಕ್ಕೆ ಸೇರಿದ ಘೋಷಣೆ ಎಂದು ಹೇಳಿ, ಕಾಲೇಜಿನಲ್ಲಿ ಇಂತಹ ಘೋಷಣೆಗಳನ್ನು ಕೂಗಬಾರದು ಎಂದು ಪ್ರಾಂಶುಪಾಲರು ವಿದ್ಯಾರ್ಥಿಗೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಆರೋಪ ಇದೀಗ ವಿವಾದಕ್ಕೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಾಹೀನ್ ಕಾಲೇಜಿನಲ್ಲಿ ವಿವಿಧ ಸಮುದಾಯಗಳ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಪ್ರಾಂಶುಪಾಲರು ವಿದ್ಯಾರ್ಥಿಗಳ ನಡುವೆ ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡುತ್ತಿದ್ದಾರೆ ಎಂದು ವಿದ್ಯಾರ್ಥಿಯ ತಂದೆ ಆರೋಪಿಸಿದ್ದಾರೆ. ಈ ಆರೋಪಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪೊಲೀಸ್ ಠಾಣೆಗೆ ದೂರು

ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿ ಸಾಗರ್ ಗೌಳಿ ಅವರ ತಂದೆ ಹಿರೋಬಾ ಗೌಳಿ ಚಿಟಗುಪ್ಪಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪ್ರಾಂಶುಪಾಲ ಅಬ್ದುಲ್ ಹಕೀಮ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಕರಣ ಬೆಳಕಿಗೆ ಬಂದ ಬಳಿಕ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕೂಡ ಆಕ್ಷೇಪ ವ್ಯಕ್ತಪಡಿಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸದ್ಯ ಪ್ರಕರಣ ದಾಖಲಾಗಿದ್ದು, ಚಿಟಗುಪ್ಪಾ ಪೊಲೀಸರು ಆರೋಪಗಳ ಕುರಿತು ತನಿಖೆ ನಡೆಸುತ್ತಿದ್ದಾರೆ.

ದೂರಿನಲ್ಲಿ ಮತ್ತೊಂದು ಗಂಭೀರ ಆರೋಪ ಮಾಡಲಾಗಿದ್ದು, ಪ್ರಾಂಶುಪಾಲರು ಹಿಂದೂ ಮತ್ತು ಮುಸ್ಲಿಂ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳ ನಡುವೆ ತಾರತಮ್ಯ ಮಾಡಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನಡುವೆ ದ್ವೇಷದ ಭಾವನೆ ಮೂಡುವಂತೆ ಹಾಗೂ ಸಾರ್ವಜನಿಕ ಶಾಂತಿಗೆ ಧಕ್ಕೆಯಾಗುವ ರೀತಿಯಲ್ಲಿ ಅವರು ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ವಿವಿಧ ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳ ನಡುವೆ ತಾರತಮ್ಯ ಮಾಡಿರುವುದು ಹಾಗೂ ದ್ವೇಷದ ಭಾವನೆಗಳನ್ನು ಉಂಟುಮಾಡಬಹುದಾದ ರೀತಿಯಲ್ಲಿ ವರ್ತಿಸಿರುವ ಪ್ರಾಂಶುಪಾಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರುದಾರರು ಮನವಿ ಮಾಡಿದ್ದಾರೆ.

ಇದಲ್ಲದೆ, ಓರ್ವ ವಿದ್ಯಾರ್ಥಿಯನ್ನು ಸುಮಾರು ಒಂದು ಗಂಟೆಗಳ ಕಾಲ ಕೊಠಡಿಯಲ್ಲಿ ಇರಿಸಿ, ಮಾನಸಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪವೂ ದೂರಿನಲ್ಲಿ ಮಾಡಲಾಗಿದೆ. ವಿದ್ಯಾರ್ಥಿ ತಂದೆ ಹಿರೋಬಾ ಗೌಳಿ ಅವರು ಆಗಸ್ಟ್ 17ರಂದು ರಾತ್ರಿ ಸುಮಾರು 7 ಗಂಟೆಗೆ ಚಿಟಗುಪ್ಪಾ ಪೊಲೀಸ್ ಠಾಣೆಗೆ ಈ ದೂರು ಸಲ್ಲಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular