ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್: ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಕ್ರಮ

ಬೆಳಗಾವಿ: ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ನಳಿಯ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ಚೇತನಕ್ಕೆ ಸರ್ಕಾರವು ಕ್ರಮ ಕೈಗೊಳ್ಳಲಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಸದಸ್ಯರಾದ ಭೀಮರಾಯ ಬಸವರಾಜ ಪಾಟೀಲ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸುದ ಸಚಿವರು. ಇದು ಬೀದರ್ ಜಿಲ್ಲೆಯ ಮೊದಲ ಕಾರ್ಖಾನೆಯಾಗಿ 25 ಸಾವಿರ ರೈತರು ಷೇರು ಹೊಂದಿದ್ದಾರೆ. ಈ ಕಾರ್ಖಾನೆ ಮುಚ್ಚಿದರೆ ಬೀದರ ಭಾಗದ ರೈತರಿಗೆ ಅನ್ಯಾಯವಾಗಲಿದೆ. ಕಾರ್ಖಾನೆಯನ್ನು ಪುನರಾರಂಭಿಸಬೇಕು ಎಂದು ಶಾಸಕರು ಮನವಿ ಮಾಡಿರು. ಇದಕ್ಕೆ ಉತ್ತರಿಸಿದ ಸಚಿವರು, ಈ ಕಾರ್ಖಾನೆಯ ಪುನಶ್ಚೇತನದ ಪ್ರಕ್ರಿಯೆಯು 2022ರಿಂದಲೇ ಆರಂಭವಾಗಿದೆ. 2022-23ನೇ ಹಂಗಾಮಿನಿಂದ 40 ವರ್ಷಗಳ ಅವಧಿಗೆ ಎಲ್.ಆರ್.ಓ.ಟಿ. ಆಧಾರದ ಮೇಲೆ ಇದ್ದಲ್ಲಿ, ಯಥಾಸ್ಥಿತಿಯಲ್ಲಿ ಖಾಸಗಿ ಅವರಿಗೆ ಗುತ್ತಿಗೆ ನೀಡಲು 2023ರಲ್ಲಿ ದಿನಪತ್ರಿಕೆಯಲ್ಲಿ ಟೆಂಡರ್ ಕರೆದರೂ ಸಹ ಬಿಡ್ಡುದಾರರು ಆಸಕ್ತಿ ತೋರಲಿಲ್ಲ. ಎರಡನೇ ಬಾರಿಗೆ ಟೆಂಡರ್ ಕರೆದರು ಸಹ ಯಾರೊಬ್ಬ ಬಿಡ್ಡುದಾರರು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗಿಯಾಗಲಿಲ್ಲ.

ಬೀದರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಸ್ತಾವನೆಯನ್ನು ಒಳಗೊಂಡಂತೆ ಒಟ್ಟು 6 ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಎನ್.ಸಿ.ಡಿ.ಸಿ.ಯಿಂದ ನೆರವನ್ನು ಪಡೆಯುವ ಕುರಿತು ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆಯನ್ನು ನಡೆಸಲಾಗುವುದು. ಎನ್.ಸಿ.ಡಿ.ಸಿ.ಯಿಂದ ಆರ್ಥಿಕ ನೆರವು ಲಭ್ಯವಾಗದಿದ್ದಲ್ಲಿ ಬೀದರ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಎಲ್.ಆರ್.ಓ.ಟಿ. ಆಧಾರದ ಮೇಲೆ ಇದ್ದಲ್ಲಿ ಯಥಾಸ್ಥಿತಿಯಲ್ಲಿ ಖಾಸಗಿಯವರಿಗೆ ದೀರ್ಘಾವಧಿಗೆ ಗುತ್ತಿಗೆ ನೀಡಲು ಮತ್ತೊಮ್ಮೆ ಟೆಂಡರ್ ಪ್ರಕಟಣೆಯನ್ನು ಹೊರಡಿಸಲು ಪರಿಶೀಲಿಸಲಾಗುವುದು ಎಂದು ಸಚಿವರು
ತಿಳಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read