ಬೀದರ್: ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೀದರ್ ನಲ್ಲಿ ನಡೆದಿದೆ.
ಜಿಲ್ಲೆಯ ಭಾಲ್ಕಿ ತಾಲೂಕಿನ ಮರೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾರಂಜಾ ಡ್ಯಾಮ್ ಕಾಲುವೆಗೆ ಜಿಗಿದು ಒಂದೇ ಕುಟುಂಬದ 6 ಜನರು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರ ಪೈಕಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಾಲ್ವರು ಸಾವನ್ನಪ್ಪಿದ್ದಾರೆ.
ಸಾಲಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ತನಿಖೆ ನಡೆಸಿದ್ದಾರೆ.