HomeLatest NewsBREAKING: ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

BREAKING: ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

ಬೀದರ್: ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೀದರ್ ನಲ್ಲಿ ನಡೆದಿದೆ.

ಜಿಲ್ಲೆಯ ಭಾಲ್ಕಿ ತಾಲೂಕಿನ ಮರೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾರಂಜಾ ಡ್ಯಾಮ್ ಕಾಲುವೆಗೆ ಜಿಗಿದು ಒಂದೇ ಕುಟುಂಬದ 6 ಜನರು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರ ಪೈಕಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಾಲ್ವರು ಸಾವನ್ನಪ್ಪಿದ್ದಾರೆ.

ಸಾಲಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular