HomeLatest NewsBIG NEWS: ಬೀದರ್ ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ ಪ್ರಕರಣ: ತನಿಖೆಗೆ ಆದೇಶಿಸಿದ ಸಚಿವ ಈಶ್ವರ...

BIG NEWS: ಬೀದರ್ ನಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ ಪ್ರಕರಣ: ತನಿಖೆಗೆ ಆದೇಶಿಸಿದ ಸಚಿವ ಈಶ್ವರ ಖಂಡ್ರೆ

ಬೀದರ್: ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ವಿದ್ಯಾರ್ಥಿಗಳೂ ಸೇರಿ 6 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬ್ದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಬಗ್ಗೆ ತನಿಖೆ ನಡೆಸುವಂತೆ ಸಚಿವ ಈಶ್ವರ ಖಂಡ್ರೆ ಆದೇಶ ನೀಡಿದ್ದಾರೆ.

ಮೊಳಕೇರಾ ಗ್ರಾಮದಲ್ಲಿ ಇಂದು ಬೆಳಿಗ್ಗೆ ಮಕ್ಕಳು ಶಾಲೆಗೆ ತೆರಳುತ್ತಿದ್ದಾಗ ರಸ್ತೆ ಬದಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ನಲವರು ವಿದ್ಯಾರ್ಥಿಗಳು ಸೇರಿ ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣದ ಬಗ್ಗೆ ತನಿಖೆ ನಡೆಸಿವಂತೆ ಜಿಲ್ಲಾಡಲಿತಕ್ಕೆ ಸೂಚನೆ ನೀಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸ್ಫೋಟಕ ಪರೀಕ್ಷಾ ತಜ್ಞರನ್ನು ಸ್ಥಳಕ್ಕೆ ಕಳುಹಿಸಿ ಮಾದರಿ ಸಂಗ್ರಹಿಸಿ ತನಿಖೆ ನಡೆಸುವಂತೆ ಆದೇಶ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಿ, ಚಿಕಿತ್ಸಾ ವೆಚ್ಚ ಭರಿಸುವಂತೆ ಜಿಲ್ಲಾಡಲಿತಕ್ಕೆ ಸೂಚನೆ ನೀಡಿದ್ದಾರೆ. ಸ್ಫೋಟಕ್ಕೆ ಕಾರಣವೇನು? ಸ್ಫೋಟಕ್ಕೆ ಬಳಸಿರುವ ವಸ್ತು ಯಾವುದು? ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಿ ಸ್ಫೋಟಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular