ಬೀದರ್: ಮಕ್ಕಳು ಆಟವಾಡುತ್ತಿದ್ದಾರೆಂದು ಪೋಷಕರು ಕೊಂಚ ಎಚ್ಚರ ತಪ್ಪಿದರೂ ಅದೆಂತಹ ದುರಂತಕ್ಕೆ ಕಾರಣರಾಗುತ್ತಾರೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಮನೆಯ ಬಳಿ ಆಟವಾಡುತ್ತಿದ್ದ ಬಾಲಕನೊಬ್ಬ ಆಕಸ್ಮಿಕವಾಗಿ ಚರಂಡಿಗೆ ಬಿದ್ದು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಮಲ್ಲಿಕ್ ಮರ್ಜಾಪುರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. 5 ವರ್ಷದ ಅವಿನಾಶ್ ಮೃತ ಬಾಲಕ. ಮನೆ ಬಳಿ ಆಟವಾಡುತ್ತಿದ್ದ ಬಾಲಕ ಮನೆ ಮುಂದೆ ಇರುವ ಚಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ.
ಮಗನನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ನಿನ್ನೆ ಶುಕ್ರವಾರ ಸಂಜೆಯಿಂದ ಬಾಲಕ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ. ಆತನಿಗಾಗಿ ಕುಟುಂಬದವರು ತೀವ್ರ ಹುಡುಕಾಟ ನಡೆಸಿದೆ. ಆದರೂ ಬಾಲಕನ ಸುಳಿವು ಸಿಕ್ಕಿಲ್ಲ.
ಇಂದು ಬೆಳಿಗ್ಗೆ ನೋಡಿದಾಗ ಬಾಲಕ ಮನೆ ಮುಂದಿನ ಚಂಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಬಗದಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕಾಗಿಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

