ಬೀದರ್: ಶ್ರೀರಾಮ, ಕೃಷ್ಣ ದೇವರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೀದರ್ ಜಿಲ್ಲೆಯ ಮೆಹಕರ್ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಅಟ್ಟರಗಾ ಗ್ರಾಮದ ಕಾಳಿದಾಸ್ ಅರ್ಜುನ್ ರಾವ್ ಸೂರ್ಯವಂಶಿ ಹಾಗೂ ರಾಹುಲ್ ಖಂಡಾರೆ ವಿರುದ್ಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಾಗಿದೆ.
ಧಾರ್ಮಿಕ ಭಾವನೆಗಳನ್ನು ಅವಮಾನಿಸಿ, ಸಮಾಜದಲ್ಲಿ ದ್ವೇಷ ಉಂಟು ಮಾಡಿದ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಕಾಳಿದಾಸ್ ಅರ್ಜುನರಾವ್ ಸೂರ್ಯವಂಶಿ ಎಂಬಾತ ಮರಾಠಿ ಭಾಷೆಯಲ್ಲಿ ಶ್ರೀರಾಮ ಹಾಗೂ ಕೃಷ್ಣ, ಗಾಂಧೀಜಿ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಿಸಿದ್ದ. ಇದನ್ನು ರಾಹುಲ್ ಖಂಡಾರೆ ತನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ. ಸಾಮಾಜೈಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಹಿಂದೂ ಪರ ಸಂಘಟನೆಗಳು ಆರೋಪಿಗಳನ್ನು ಬಂಧಿಸುವಮ್ತೆ ಪೊಲೀಸ್ ಠಾಣೆ ಎದುರು ಪ್ರತಿಭಟಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

