HomeKarnatakaಮದುವೆಗೆ ಹೋಗಿದ್ದಾಗ ಕಳ್ಳರ ಕೈಚಳಕ: ಮನೆಗೆ ನುಗ್ಗಿ 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ಬೆಳ್ಳಿ,...

ಮದುವೆಗೆ ಹೋಗಿದ್ದಾಗ ಕಳ್ಳರ ಕೈಚಳಕ: ಮನೆಗೆ ನುಗ್ಗಿ 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ಬೆಳ್ಳಿ, ಹಣ ದೋಚಿ ಪರಾರಿ

ಬೀದರ್: ಕುಟುಂಬದವರೆಲ್ಲರೂ ಸಂಬಂಧಿಕರ ಮದುವೆಗೆ ಹೋಗಿದ್ದಾಗ ಮನೆಯ ಬೀಗ ಮುರಿದು 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ಲಕ್ಷಾಂತರ ಮೌಲ್ಯದ ಬೆಳ್ಳಿ ಆಭರಣಗಳು, 1.50 ಲಕ್ಷ ನಗದು ದೋಚಿ ಕಳ್ಳರು ಪರಾರಿಯಾದ ಘಟನೆ ಬೀದರ್ ನಲ್ಲಿ ನಡೆದಿದೆ.

ಇಲ್ಲಿನ ಚಿದ್ರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 150 ಗ್ರಾಂ ಚಿನ್ನದ ಆಭರಣಗಳು, 100 ಗ್ರಾಂ ಬೆಳ್ಳಿ ಆಭರಣಗಳು ಮತ್ತು 1.50 ಲಕ್ಷ ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ರಾಜಕುಮಾರ ಬಿರಾದರ್ ಚಿದ್ರಿ ಎಂಬವರ ಮನೆಯ ಬೀಗ ಮತ್ತು ಅಲಮರಿ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಮಧ್ಯಾಹ್ನ ಮದುವೆ ಸಮಾರಂಭಕ್ಕೆ ಹೋಗಿ ರಾತ್ರಿ ಮನೆಗೆ ಬಂದಾಗ ಕಳ್ಳತನವಾಗಿದ್ದು ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ಮಾಡಿದೆ. ಘಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ, ಗಾಂಧಿಗಂಜ್ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ. ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular