HomeKarnatakaಸರ್ಕಾರಿ ಶಾಲೆಯಲ್ಲಿದ್ದ 6 ಸಿಲಿಂಡರ್ ಗಳನ್ನೇ ಕದ್ದೊಯ್ದ ಕಳ್ಳರು

ಸರ್ಕಾರಿ ಶಾಲೆಯಲ್ಲಿದ್ದ 6 ಸಿಲಿಂಡರ್ ಗಳನ್ನೇ ಕದ್ದೊಯ್ದ ಕಳ್ಳರು

ಬೀದರ್: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಎಲ್ ಪಿಜಿ ಸಿಲಿಂಡರ್ ಅಭಾವ ಶುರುವಾಗಿದ್ದು, ಈ ನಡುವೆ ಸರ್ಕಾರಿ ಶಾಲೆಯಲ್ಲಿದ್ದ 6 ಸಿಲಿಂಡರ್ ಗಳನ್ನೇ ಕಳ್ಳರು ಕದ್ದೊಯ್ದ ಘಟನೆ ಬೀದರ್ ನಲ್ಲಿ ನಡೆದಿದೆ.

ಬೀದರ್ ಜಿಲ್ಲೆಯ ಹಲಸೂರು ತಾಲೂಕಿನ ಗೊರ್ಟಾ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಕರ್ನಾಟಕ ಪಬ್ಲಿಕ್ ಶಾಲೆಯ ಅಡುಗೆ ಕೋಣೆಯ ಬೀಗ ಮುರಿದಿರುವ ಕಳ್ಳರು, ಅಲ್ಲಿದ್ದ 6 ಸಿಲಿಂಡರ್ ಗಳನ್ನು ಕದ್ದು ಪರಾರಿಯಾಗಿದ್ದಾರೆ.

ಎಂದಿನಂತೆ ಇಂದು ಶಿಕ್ಷಕರು ಶಾಲೆಗೆ ಬಂದಾಗಲೇ ಅಡುಗೆ ಕೋಣೆ ಬೀಗ ಮುರಿದಿರುವುದು ಹಾಗೂ ಸಿಲಿಂಡರ್ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಮಕ್ಕಳಿಗೆ ಬಿಸಿಯೂಟ ತಯಾರಿಸಲು ಸಿಲಿಂಡರ್ ಇಲ್ಲದಂತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular