HomeKarnatakaಮನೆಯಲ್ಲಿ ಮಲಗಿದ್ದ 5 ತಿಂಗಳ ಮಗುವಿನ ಮೇಲೆ ಬೀದಿ ನಾಯಿ ದಾಳಿ: ಕಂದಮ್ಮ ದಾರುಣ ಸಾವು

ಮನೆಯಲ್ಲಿ ಮಲಗಿದ್ದ 5 ತಿಂಗಳ ಮಗುವಿನ ಮೇಲೆ ಬೀದಿ ನಾಯಿ ದಾಳಿ: ಕಂದಮ್ಮ ದಾರುಣ ಸಾವು

ಬೀದರ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೀದಿನಾಯಿಗಳ ಅಟ್ಟಹಾಸ ಮುಂದುವರೆದಿದೆ. ಬೀದಿನಾಯಿಗಳ ದಾಳಿಗೆ ಮಕ್ಕಳು, ವೃದ್ಧರು ಬಲಿಯಾಗುತ್ತಿದ್ದರೂ ಸಂಬಂಧ ಪಟ್ಟ ಅಧಿಕಾರಿಗಳು ಮಾತ್ರ ಯಾವುದೇ ಕ್ರಮಕ್ಕೆ ಮುಂದಾಗದಿರುವುದು ದುರಂತ.

ಬೀದಿ ನಾಯಿ ದಾಳಿಗೆ 5 ತಿಂಗಳ ಹಸೂಗೂಸು ಸಾಅವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

5 ತಿಂಗಳ ಶಿವಾನಿ ಮೃತ ಕಂದಮ್ಮ. ಸುಧಾ ಹಾಗೂ ಸಿದ್ದಪ್ಪ ದಂಪತಿಯ ಮಗು. ಮಗುವನ್ನು ಮನೆಯ ಪಡಸಾಲೆಯಲ್ಲಿ ಮಲಗಿಸಿ ತಾಯಿ ಕೆಲಸ ಮಾಡುತ್ತಿದ್ದರು. ಈ ವೇಳೆ ಎಲ್ಲಿಂದಲೋ ಬಂದ ಬೀದಿನಾಯಿ ಮನೆಯೊಳಗೆ ನುಗ್ಗಿ ಮಗುವಿನ ಮೇಲೆ ದಾಳಿ ನಡೆಸಿದೆ.

ಹಸುಗೂಸನ್ನಮನಬಂದಂತೆ ಕಚ್ಚಿ ಗಾಯಗೊಳಿಸಿದೆ. ತೀವ್ರ ಗಂಭೀರವಾಗಿ ದಾಳಿಗೊಳಗಾಗಿದ್ದ ಮಗುವನ್ನು ತಕ್ಷಣ ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ.

ಗ್ರಾಮದಲ್ಲಿ ಬೀದಿನಾಯಿಗಳು ಹೆಚ್ಚುತ್ತಿದ್ದರೂ ಕಡಿವಾಣ ಹಾಕದೆ ಹುಮ್ನಾಬಾದ್ ಪುರಸಭೆ ಅಧಿಕಾರಿಗಳು ನಿರ್ಲಕ್ಷ ವಹಿಸಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular