HomeEntertainmentನಾಳೆ 'ಉಪಾಧ್ಯಕ್ಷ' ಚಿತ್ರ ತಂಡದಿಂದ ಬಿಗ್ ಅನೌನ್ಸ್ಮೆಂಟ್

ನಾಳೆ ‘ಉಪಾಧ್ಯಕ್ಷ’ ಚಿತ್ರ ತಂಡದಿಂದ ಬಿಗ್ ಅನೌನ್ಸ್ಮೆಂಟ್

ಚಿಕ್ಕಣ್ಣ ಅಭಿನಯದ ಅನಿಲ್ ಕುಮಾರ್ ನಿರ್ದೇಶನದ ‘ಉಪಾಧ್ಯಕ್ಷ’ ಸಿನಿಮಾ  ಜನವರಿ 26ರಂದು ರಾಜ್ಯದ್ಯಂತ ತೆರೆ ಕಾಣಲಿದ್ದು, ಸಿನಿ ಪ್ರೇಕ್ಷಕರು  ಕಾತುರದಿಂದ ಕಾಯುತ್ತಿದ್ದಾರೆ. ಉಪಾಧ್ಯಕ್ಷ ಚಿತ್ರತಂಡ ಒಂದರ ಮೇಲೊಂದು ಸಿಹಿ ಸುದ್ದಿಯನ್ನು ನೀಡುತ್ತಿದ್ದು, ನಾಳೆ ಬಿಗ್ ಅನೌನ್ಸ್ಮೆಂಟ್ ಒಂದನ್ನು ಘೋಷಿಸುವುದಾಗಿ  ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ.

ಡಿಎನ್ ಸಿನಿಮಾಸ್  ಬ್ಯಾನರ್ ನಡಿ ಸ್ಮಿತಾ ಉಮಾಪತಿ ನಿರ್ಮಾಣ ಮಾಡಿರುವ ಈ ಸಿನಿಮಾದಲ್ಲಿ ಚಿಕ್ಕಣ್ಣ ಸೇರಿದಂತೆ ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯ ಮಲೈಕಾ ವಾಸುಪಾಲ್, ರವಿಶಂಕರ್, ಸಾಧುಕೋಕಿಲ ತೆರೆ ಹಂಚಿಕೊಂಡಿದ್ದಾರೆ. ಕೆ ಎಂ ಪ್ರಕಾಶ್ ಸಂಕಲನವಿದ್ದು, ಶೇಖರ್ ಚಂದ್ರ ಛಾಯಾಗ್ರಹಣವಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದಾರೆ. ಇದೊಂದು ಕಾಮಿಡಿ ಡ್ರಾಮಾ ಕಥಾಧಾರಿತ ಸಿನಿಮಾ ಎಂದು ಹೇಳಲಾಗಿದ್ದು, ನಟ ಶರಣ್ ಅತಿಥಿ ಪಾತ್ರ ಒಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular