HomeIndiaಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿಗೆ ಬಿಗ್ ಶಾಕ್: ಮೈತ್ರಿಕೂಟದಿಂದ ಸಮಾಜವಾದಿ ಪಕ್ಷ ಹೊರಕ್ಕೆ

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿಗೆ ಬಿಗ್ ಶಾಕ್: ಮೈತ್ರಿಕೂಟದಿಂದ ಸಮಾಜವಾದಿ ಪಕ್ಷ ಹೊರಕ್ಕೆ

ಮುಂಬೈ: ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿಗೆ ದೊಡ್ಡ ಹೊಡೆತ ಬಿದ್ದಿದೆ. ಸಮಾಜವಾದಿ ಪಕ್ಷವು ಮೈತ್ರಿಯಿಂದ ಹೊರಬರಲು ನಿರ್ಧರಿಸಿದೆ.

ಸಮಾಜವಾದಿ ಪಕ್ಷದ ನಾಯಕ ಅಬು ಅಜ್ಮಿ ಅವರು ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಧೂಳಿಪಟವಾದ ಸೋಲಿನ ನಂತರ ತಮ್ಮ ಪಕ್ಷವು ಮೈತ್ರಿಯಿಂದ ಹೊರಬರಲು ನಿರ್ಧರಿಸಿದೆ ಎಂದು ಶನಿವಾರ ಘೋಷಿಸಿದ್ದಾರೆ.

ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಕೆಡವಿದವರಿಗೆ ಶಿವಸೇನೆ-ಯುಬಿಟಿ ಬೆಂಬಲ ವ್ಯಕ್ತಪಡಿಸಿದ ಬಗ್ಗೆ ಸಮಾಜವಾದಿ ಪಕ್ಷವು ಅಸಮಾಧಾನಗೊಂಡಿದೆ ಎಂದು ತಮ್ಮ ಮುಖವಾಣಿ ‘ಸಾಮ್ನಾ’ದಲ್ಲಿ ವರದಿ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಬು ಅಜ್ಮಿ ಮಾತನಾಡಿ, “ಅವರು(ಶಿವಸೇನೆ – ಯುಬಿಟಿ) ಕಾಂಗ್ರೆಸ್, ಎನ್‌ಸಿಪಿ-ಎಸ್‌ಪಿ ಮತ್ತು ಎಸ್‌ಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರಿಂದ ಈಗ ಜಾತ್ಯತೀತರಾಗಿದ್ದಾರೆ ಎಂದು ಹೇಳುತ್ತಿದ್ದರು. ಸೋತ ನಂತರ ಅವರು ತಮ್ಮ ಹಳೆ ಕೆಲಸವನ್ನು ಮಾಡಲು ಪ್ರಾರಂಭಿಸಿದ್ದಾರೆ. ಇಂತಹ ಘಟನೆಗಳು ನಡೆದರೆ ಮಹಾ ವಿಕಾಸ್ ಅಘಾಡಿ ಮುಂದುವರಿಯುವುದಿಲ್ಲ” ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular