HomeKarnatakaBREAKING : ಬಿಗ್ ಬಾಸ್ ಸ್ಪರ್ಧಿ 'ವರ್ತೂರು ಸಂತೋಷ್' ಅರೆಸ್ಟ್

BREAKING : ಬಿಗ್ ಬಾಸ್ ಸ್ಪರ್ಧಿ ‘ವರ್ತೂರು ಸಂತೋಷ್’ ಅರೆಸ್ಟ್

ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಜನ್-10ರ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ವರ್ತೂರು ಸಂತೋಷ್ ಅವರನ್ನು ಬಂಧಿಸಿದ್ದಾರೆ. ಇದೇ ಮೊದಲ ಬಾರಿಗೆ ಕನ್ನಡದ ಬಿಗ್ ಬಾಸ್ ಮನೆಯಲ್ಲಿ ಇಂತದ್ದೊಂದು ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವರ್ತೂರು ಸಂತೋಷ್ ಹಲವು ಪ್ರಾಣಿಗಳನ್ನು ಸಾಕಿದ್ದಾರೆ. ಹಳ್ಳಿಕಾರ್ ಕ್ಯಾಟಲ್ ಬ್ರೀಡ್ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಅಲ್ಲದೇ ಅಖಿಲ ಭಾರತ ಹಳ್ಳಿಕಾರ್ ತಳಿ ಸಂರಕ್ಷಣಾ ಸಮಿತಿ ಅಧ್ಯಕ್ಷರಾಗಿದ್ದಾರೆ.

ಬಿಗ್ ಬಾಸ್ ಸ್ಪರ್ಧಿ ಸಂತೋಷ್ ಕತ್ತಿನಲ್ಲಿ ದೊಡ್ಡ ಚೈನು ಹಾಕಿಕೊಂಡಿದ್ದು, ಅದರಲ್ಲಿ ಹುಲಿ ಉಗುರು ಇದೆ ಎನ್ನಲಾಗಿದೆ. ಹುಲಿ ಉಗುರು ಧರಿಸಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಂತೋಷ್ ಅವರನ್ನು ಬಂಧಿಸಿದ್ದಾರೆ.

ತಡ ರಾತ್ರಿ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ರಾಮೋಹಳ್ಳಿ ಅರಣ್ಯ ಇಲಾಖೆ ಅಧಿಕಾರಿಗಳು ವರ್ತೂರು ಸಂತೋಷ್ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular