ಮೈಸೂರು: ಬಿಗ್ ಬಾಸ್ ಕನ್ನಡ ಸೀಜನ್ -12ಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಬಿಗ್ ಬಾಸ್ ಸೀಜನ್ -12ರ ದಿನಾಂಕ ಘೋಷಿಸಿದ್ದಾರೆ.
ನಿರ್ಮಾಪಕ ಸಂದೇಶ್ ನಾಗರಾಜ್ ಅವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗಿಯಾದ ನಟ ಕಿಚ್ಚ ಸುದೀಪ್, ಈ ಬಾರಿಯ ಬಿಗ್ ಬಾಸ್ ಪ್ರಾರಂಭದ ದಿನಾಂಕ ಘೋಷಣೆ ಮಾಡಿದ್ದಾರೆ.
ಅಭಿಮಾನಿಗಳ ಚಪ್ಪಾಳೆ, ಶಿಳ್ಲೆಗಳ ನಡುವೆ ಮಾತನಾಡಿದ ಕಿಚ್ಚ ಸುದೀಪ್, ಶೀಘ್ರದಲ್ಲಿಯೇ ತೆರೆ ಮೇಲೆ ಬರುತ್ತಿದ್ದೇನೆ. ಸೆಪ್ಟೆಂಬರ್ 28ರಿಂದ ಕಿರುತೆರೆಗೆ ಬರಲಿದ್ದೇನೆ ಎಂದು ಹೇಳುವ ಮೂಲಕ ಬಿಗ್ ಬಾಸ್ ಪ್ರಸಾರದ ದಿನಾಂಕ ಘೋಷಿಸಿದರು.
ಈ ಬಾರಿಯೂ ಕಿಚ್ಚ ಸುದೀಪ್ ಅವರೇ ಬಿಗ್ ಬಾಸ್ ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ. ಇದೀಗ ದಿನಾಂಕವನ್ನೂ ಅವರೇ ಅನೌನ್ಸ್ ಮಾಡಿದ್ದಾರೆ. ಮೂಲಗಳ ಪ್ರಕಾರ ಈಗಾಗಲೇ ಬಹುತೇಕ ಸ್ಪರ್ಧಿಗಳ ಆಯ್ಕೆಯಾಗಿದ್ದು, ಕೆಲವರ ಆಯ್ಕೆ ಮಾತ್ರ ಬಾಕಿ ಇದೆ ಎನ್ನಲಾಗಿದೆ.