BREAKING NEWS: ಬಿಗ್ ಬಾಸ್ ಮಾಜಿ ಸ್ಪರ್ಧಿ ವಿನಯ್ ಹಾಗೂ ರಜತ್ ಕಿಶನ್ ಪೊಲೀಸ್ ವಶಕ್ಕೆ

ಬೆಂಗಳೂರು: ಲಾಂಗ್ ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಹಾಗೂ ರಜತ್ ಕಿಶನ್ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಪೊಲೀಸರು, ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ವಿನಯ್ ಹಾಗೂ ರಜತ್ ಕಿಶನ್ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾಗಿದ್ದ ವಿನಯ್ ಹಾಗೂ ರಜತ್ ಕಿಇಶನ್, ಡಿ ಬಾಸ್ ಬಟ್ಟೆ ಧರಿಸಿ ಕೈಯಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದರು. ಸಾಮಾಜಿಕ ಜಾಲತಾಣಗಳಲ್ಲ್ಲಿ ರೀಲ್ಸ್ ವಿಡಿಯೋ ವೈರಲ್ ಆಗಿತ್ತು. ಅಲ್ಲದೇ ಇಬ್ಬರು ರೀಲ್ಸ್ ಗೆ ಬಳಸಿದ್ದು ನಿಜವಾದ ಲಾಂಗ್ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಬಸವೇಶ್ವರ ನಗರ ಠಾಣೆಯಲ್ಲಿ ವಿನಯ್ ಹಾಗೂ ರಜತ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.

ಪ್ರಕರಣ ಸಂಬಂಧ ಇಬ್ಬರಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ವಿಚಾರಣೆಗೆ ಹಾಜರಾಗಿದ್ದ ಇಬ್ಬರನ್ನೂ ವಿಚಾರಣೆ ಬಳಿಕ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read