HomeEntertainmentಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿಗ್ ಬಾಸ್ ವಿನ್ನರ್ ಕಾರ್ತಿಕ್

ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ಬಿಗ್ ಬಾಸ್ ವಿನ್ನರ್ ಕಾರ್ತಿಕ್

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಜನ್ -10ರ ವಿನ್ನರ್ ಕಾರ್ತಿಕ್ ಮಹೇಶ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ನಟ ಕಾರ್ತಿಕ್ ಮಹೇಶ್, ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆಶಿರ್ವಾದ ಪಡೆದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಒಳ್ಳೆಯದಾಗಲಿ, ಸಿನಿಮಾ ರಂಗದಲ್ಲಿ ಒಳ್ಳೆಯ ಹೆಸರು ಮಾಡು ಎಂದು ಶುಭ ಹಾರೈಸಿದ್ದಾರೆ.

ಈ ವೇಳೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾ.ಮ.ಹರೀಶ್, ಉಲ್ಲಾಸ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಗ್ ಬಾಸ್ ಗೆದ್ದ ಬಳಿಕ ಕಾರ್ತಿಕ್ ಮಹೇಶ್ ಜನಪ್ರಿಯತೆ ಹೆಚ್ಚಿದ್ದು, ಹಿರಿಯ ನಟರನ್ನು, ರಾಜಕಾರಣಿಗಳು ಭೇಟಿಯಾಗಿ ಆಶಿರ್ವಾದ ಪಡೆಯುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular