HomeIndiaBIG BREAKING: ಆಂಧ್ರ ಮುಖ್ಯಮಂತ್ರಿ ಆಗಿ ಜೂನ್ 9ರಂದು ಚಂದ್ರಬಾಬು ನಾಯ್ಡು ಪ್ರಮಾಣ ವಚನ

BIG BREAKING: ಆಂಧ್ರ ಮುಖ್ಯಮಂತ್ರಿ ಆಗಿ ಜೂನ್ 9ರಂದು ಚಂದ್ರಬಾಬು ನಾಯ್ಡು ಪ್ರಮಾಣ ವಚನ

ಈ ಬಾರಿಯ ಲೋಕಸಭಾ ಚುನಾವಣೆ ಜೊತೆಗೆ ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯೂ ನಡೆದಿದ್ದು, ಚಂದ್ರಬಾಬು ನೇತೃತ್ವದ ತೆಲುಗು ದೇಶಂ ಪಾರ್ಟಿ, ಆಡಳಿತರೂಢ ಜಗನ್ಮೋಹನ್ ರೆಡ್ಡಿ ನೇತೃತ್ವದ YSR ಕಾಂಗ್ರೆಸ್ ಪಕ್ಷವನ್ನು ವಿಧಾನಸಭಾ ಚುನಾವಣೆಯಲ್ಲಿ ಮಣಿಸಿ ಅಧಿಕಾರದ ಗದ್ದುಗೆ ಹಿಡಿದಿದೆ. ಹಾಗೆಯೇ ಲೋಕಸಭಾ ಚುನಾವಣೆಯಲ್ಲೂ ಉತ್ತಮ ಫಲಿತಾಂಶ ಪಡೆದಿದೆ.

ವಿಧಾನಸಭಾ ಚುನಾವಣೆಯಲ್ಲಿ ತೆಲುಗು ದೇಶಂ ಪಾರ್ಟಿ 130 ಸ್ಥಾನಗಳನ್ನು ಗಳಿಸಿದ್ದು ನಿಚ್ಚಳ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ. ಟಿ ಡಿ ಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಜೂನ್ 9ರಂದು ಆಂಧ್ರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಲೋಕಸಭಾ ಚುನಾವಣೆಯಲ್ಲಿ ಟಿಡಿಪಿ 16 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ.

For Latest News Updates, Join Our Whatsapp Community🚩
RELATED ARTICLES

Most Popular