ಮಾಜಿ ಸಚಿವ ಈಶ್ವರಪ್ಪ ಅವರಿಗೆ ಶಿವಮೊಗ್ಗ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಟಿಕೆಟ್ ಘೋಷಣೆಗೂ ಮುನ್ನವೇ ಈಶ್ವರಪ್ಪನವರು ಚುನಾವಣಾ ರಾಜಕೀಯದಿಂದ ತಮ್ಮ ನಿವೃತ್ತಿ ಘೋಷಿಸಿದ್ದರು.
ಆದರೆ ಬಿಜೆಪಿ ಹೈಕಮಾಂಡ್, ಒತ್ತಾಯ ಪೂರ್ವಕವಾಗಿ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವಂತೆ ಮಾಡಿದೆ ಎಂಬ ಆಕ್ರೋಶ ಅವರ ಬೆಂಬಲಿಗರಲ್ಲಿ ವ್ಯಕ್ತವಾಗುತ್ತಿದ್ದು, ಹೀಗಾಗಿ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.
ಹೀಗಾಗಿ ಇಂದು ಸಭೆ ನಡೆಸಿರುವ ಮೇಯರ್ – ಉಪ ಮೇಯುರ್ ಸೇರಿದಂತೆ ಶಿವಮೊಗ್ಗ ಮಹಾನಗರ ಪಾಲಿಕೆಯ 19 ಮಂದಿ ಕಾರ್ಪೊರೇಟರ್ಗಳು ಪಕ್ಷದ ವಿವಿಧ ಹುದ್ದೆಗಳಿಗೆ ಸಾಮೂಹಿಕವಾಗಿ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಬಳಿಕ ಬೆಂಗಳೂರಿಗೆ ತೆರಳಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.