BIG BREAKING: ಚುನಾವಣಾ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್; ವರುಣಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿಢೀರ್ ಬದಲಾವಣೆ

ಚುನಾವಣಾ ರಾಜಕೀಯದಲ್ಲಿ ದಿನಕ್ಕೊಂದು ಬೆಳವಣಿಗೆಗಳ ನಡೆಯುತ್ತಿದ್ದು, ಎರಡು ಕ್ಷೇತ್ರಗಳ ಅಭ್ಯರ್ಥಿಗಳನ್ನು ಬದಲಿಸಿದ್ದ ಜೆಡಿಎಸ್ ನಾಯಕರು ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪರ್ಧಿಸಿರುತ್ತಿರುವ ವರುಣಾ ಕ್ಷೇತ್ರದಲ್ಲೂ ಕೊನೆ ಕ್ಷಣದಲ್ಲಿ ಅಭ್ಯರ್ಥಿಯನ್ನು ಬದಲಾವಣೆ ಮಾಡಿದ್ದಾರೆ.

ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ವರುಣಾ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಿಸಿದ ಜೆಡಿಎಸ್ ನಾಯಕರು, ಅಭಿಷೇಕ್ ಅವರಿಗೆ ಅವಕಾಶ ನೀಡಿದ್ದರು. ಆದರೆ ಸಿದ್ದರಾಮಯ್ಯನವರ ಸ್ಪರ್ಧೆ ವಿಚಾರ ಘೋಷಣೆಯಾದ ಬಳಿಕ ಅಭಿಷೇಕ್ ಪ್ರಚಾರ ಕಾರ್ಯದಿಂದ ತಟಸ್ಥರಾಗುಳಿದಿದ್ದಾರೆ ಎಂದು ಹೇಳಲಾಗಿತ್ತು.

ಈ ಹಿನ್ನೆಲೆಯಲ್ಲಿ ಇದೀಗ ಮಾಜಿ ಶಾಸಕ ಭಾರತಿ ಶಂಕರ್ ಅವರಿಗೆ ವರುಣಾ ಕ್ಷೇತ್ರದ ಜೆಡಿಎಸ್ ಟಿಕೆಟ್ ನೀಡಲಾಗಿದೆ. ಇನ್ನು ಅರಸಿಕೆರೆ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಲಾಗಿದ್ದು, ಅಶೋಕ್ ಬದಲಿಗೆ ಯಡಿಯೂರಪ್ಪನವರ ಮಾಜಿ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಸಂತೋಷ್, ದೇವೇಗೌಡರ ಸಮ್ಮುಖದಲ್ಲಿ ಇಂದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read