HomeKarnatakaBIG BREAKING: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ವಿ. ಸೋಮಣ್ಣಗೆ ಭರ್ಜರಿ ಗೆಲುವು

BIG BREAKING: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ವಿ. ಸೋಮಣ್ಣಗೆ ಭರ್ಜರಿ ಗೆಲುವು

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಕಣಕ್ಕಿಳಿದಿದ್ದ ಮಾಜಿ ಸಚಿವ ವಿ. ಸೋಮಣ್ಣ ಎರಡೂ ಕ್ಷೇತ್ರಗಳಲ್ಲಿ ಪರಾಭವಗೊಂಡಿದ್ದರು.

ತಮಗೆ ಇಷ್ಟವಿಲ್ಲದಿದ್ದರೂ ಸಹ ಬೇರೆ ಕ್ಷೇತ್ರಗಳಲ್ಲಿ ಕಣಕ್ಕಿಳಿಸುವ ಮೂಲಕ ನನ್ನನ್ನು ರಾಜಕೀಯವಾಗಿ ಮೂಲೆಗುಂಪು ಮಾಡಲು ಪ್ರಯತ್ನ ನಡೆಯುತ್ತಿದೆ ಎಂದು ವಿ. ಸೋಮಣ್ಣ ಪದೇ ಪದೇ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು.

ಆ ಬಳಿಕ ಅವರಿಗೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ನೀಡಲಾಗಿದ್ದು, ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಮುದ್ದು ಹನುಮೇಗೌಡ ವಿರುದ್ಧ ಅವರು ಜಯ ಸಾಧಿಸಿದ್ದಾರೆ. ಮತ ಎಣಿಕೆ ಕಾರ್ಯ ಈಗಾಗಲೇ ಬಹುತೇಕ ಪೂರ್ಣಗೊಂಡಿದ್ದು, ಅಧಿಕೃತ ಫಲಿತಾಂಶ ಮಾತ್ರ ಘೋಷಣೆಯಾಗಬೇಕಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular